ಸುಳ್ಯ ಕ್ಷೇತ್ರಾದ್ಯಂತ ಉತ್ಸಾಹದ ಅಲೆ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರಾದ್ಯಂತ ಶಾಂತಿಯುತವಾಗಿ ಮತ್ತು ಉತ್ಸಾಹದಿಂದ ಮತದಾನ ನಡೆದಿದೆ. ಕ್ಷೇತ್ರದ ಬಹುತೇಕ ಮತದಾನ ಕೇಂದ್ರಗಳಲ್ಲಿ ಬೆಳಗ್ಗಿನಿಂದಲೇ ಸರತಿ ಸಾಲು ಕಂಡು ಬಂದಿದ್ದು, ಬಹುತೇಕ ಕಡೆಗಳಲ್ಲಿ ಮಧ್ಯಾಹ್ನದ ವೇಳೆಗಾಗಲೇ ಮತದಾನದ ಪ್ರಮಾಣ ಶೇ.60 ದಾಟಿತ್ತು. ಉಬರಡ್ಕ ಮಿತ್ತೂರು, ಕಲ್ಮಡ್ಕ ಮತದಾನ ಕೇಂದ್ರಗಳಲ್ಲಿ ಮತಯಂತ್ರದಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದಾಗಿ ಮತದಾನ ಒಂದು ಗಂಟೆ ತಡವಾಗಿ ಆರಂಭಗೊಂಡಿತು.
ಕುಸಿದ ವೃದ್ಧೆ, ಬೈಕ್ ಡಿಕ್ಕಿ: ಕುಂಬಳಚೇರಿ ಮತಗಟ್ಟೆಗೆ ಮತ ಚಲಾಯಿಸಲು ಬಂದ ಐತಮ್ಮ ಎಂಬ ವೃದ್ಧೆ ಕುಸಿದುಬಿದ್ದ ಘಟನೆ ನಡೆಯಿತು. ಅರಂಬೂರಿನಲ್ಲಿ ಮತಚಲಾಯಿಸಲು ಬಂದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆಯಿತು. ಗಾಂಧಿನಗರ ಮತದಾನ ಕೇಂದ್ರದಲ್ಲಿ ಆಮ್ ಆದ್ಮಿ ಬೆಂಬಲಿಗರು ತಮ್ಮ ಚಿಹ್ನೆಯಾದ ಪೊರಕೆಯೊಂದಿಗೆ ನಿಂತಿದ್ದರು. ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ ತಾಲೂಕಿನ ವಿವಿಧ ಬೂತ್‌ಗಳ ಬಳಿ ತೆರಳಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

