ಮತಯಂತ್ರ ದೋಷ
ಮೂರ್ನಾಡು: ಮೂರ್ನಾಡು ಪಟ್ಟಣ ಹಾಗೂ ಮುತ್ತಾರುಮುಡಿಯಲ್ಲಿ ಮಧ್ಯಾಹ್ನ ವೇಳೆಯಲ್ಲಿ ಸುರಿದ ಮಳೆ ಮತದಾನಕ್ಕೆ ಆಗಮಿಸುವವರಿಗೆ ಕಿರಿಕಿರಿ ಉಂಟುಮಾಡಿತು ಮಾತ್ರವಲ್ಲದೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಬೆಳಗ್ಗೆ ಮತಯಂತ್ರದಲ್ಲಿ ದೋಷ ಉಂಟಾಗಿ ಕೆಲಕಾಲ ಮತದಾನಕ್ಕೆ ತೊಂದರೆಯಾಯಿತು. ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2 ಮತಗಟ್ಟೆ ಕೇಂದ್ರ, ಬಾಡಗ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ಮತಗಟ್ಟೆ ಕೇಂದ್ರ, ಮುತ್ತಾರುಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ಮತಗಟ್ಟೆ ಕೇಂದ್ರ, ಐಕೊಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ಮತಗಟ್ಟೆ ಕೇಂದ್ರ, ಕಿಗ್ಗಾಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 1 ಮತಗಟ್ಟೆ ಕೇಂದ್ರ ಹಾಗೂ ಮೂರ್ನಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ 1 ಮತಗಟ್ಟೆ ಕೇಂದ್ರದಲ್ಲಿ ಮತದಾನ ನಡೆಯಿತು. ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆ ಕೇಂದ್ರದಲ್ಲಿ ಬೆಳಗ್ಗಿನ ಹೊತ್ತು ಬಿರುಸಾಗಿ ಮತದಾನ ನಡೆಯಿತು ಹಾಗೂ ಮೂರ್ನಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಬೆಳ್ಳಗೆಯಿಂದ ಇಳಿಮುಖವಾಗಿದ್ದ ಮತದಾರರು ಸಂಜೆ ವೇಳೆಯಲ್ಲಿ ಅಧಿಕವಾದರು. ಐಕೊಳ, ಬಾಡಗ, ಕಿಗ್ಗಾಲುವಿನಲ್ಲಿ ಬೆಳಗ್ಗೆಯಿಂದ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿ ತೆರಳುತ್ತಿರುವುದು ಕಂಡು ಬಂತು. ಮತದಾರರನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಕಾರ್ಯಕರ್ತರು ವಾಹನಗಳ ಸೌಲಭ್ಯಗಳನ್ನು ಕಲ್ಪಿಸಿದ್ದರು. ಬೆಳಗ್ಗೆಯಿಂದ ಮತದಾನ ಕೇಂದ್ರದ ಬಳಿ ವಿವಿಧ ಪಕ್ಷದ ಕಾರ್ಯಕರ್ತರು ಮತದಾರರನ್ನು ಓಲೈಸುವಲ್ಲಿ ತಲ್ಲೀನರಾಗಿದ್ದರು. ಮತಗಟ್ಟೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

