ದಕ್ಷಿಣ ಕನ್ನಡ

ಕಲಾವಿದ ಅಂಬರೀಶ್ ಶೆಟ್ಟಿಗೆ ಸನ್ಮಾನ

Published On :

ಮೂಲ್ಕಿ:  ದಿವಾಣ ಭೀಮ ಭಟ್ ಅವರ ಜನ್ಮ ಶತಮಾನೋತ್ಸವ ಸರಣಿ ಕಾರ್ಯಕ್ರಮದ ಪ್ರಯುಕ್ತ ಕಿನ್ನಿಗೋಳಿಯ ಯುಗಪುರುಷದ ಸಭಾಭವನದಲ್ಲಿ ಜರಗಿದ ಯಕ್ಷಗಾನ ತಾಳಮದ್ದಳೆ- ಸಂಮಾನ ಕಾರ್ಯಕ್ರಮದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಅಂಬರೀಶ್ ಶೆಟ್ಟಿ ಮೂಲ್ಕಿಯವರನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ದಿವಾಣ ಭೀಮ ಭಟ್ ಶಿಷ್ಯ ವೃಂದದ ದಿವಾಣ ಬಳಗವನ್ನು ಶ್ರೀ ಕ್ಷೇತ್ರ ಕಟೀಲಿನ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಉದ್ಘಾಟಿಸಿದರು. ಮರಳೀಧರ್ ಭಟ್ ಕಟೀಲು ದಿವಾಣ ಭೀಮ ಭಟ್ ಸಂಸ್ಮರಣಾ ಭಾಷಣಗೈದರು. ಯಕ್ಷಲಹರಿಯ ಕಾರ್ಯದರ್ಶಿ ಶ್ರೀಧರ್ ಡಿ.ಎಸ್. ಅಭಿನಂದನಾ ಭಾಷಣ ಮಾಡಿದರು. ವಿದ್ವಾನ್ ಹಿರಣ್ಯ ವೆಂಕಟೇಶ್ ಭಟ್, ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಯಕ್ಷಲಹರಿಯ ಇ. ಶ್ರೀನಿವಾಸ್ ಭಟ್, ದಿವಾಣ ಭೀಮ ಭಟ್ ಶಿಷ್ಯ ವೃಂದದ ಪದ್ಮನಾಭ ಶೆಟ್ಟಿಗಾರ್, ಉದ್ಯಮಿ ಪೃಥ್ವಿರಾಜ್ ಆಚಾರ್ಯ, ಜಯರಾಮ ಶೆಟ್ಟಿ ಸಾಲೆತ್ತೂರು, ದಿವಾಣ ಗೋವಿಂದ ಭಟ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.