ದಕ್ಷಿಣ ಕನ್ನಡ

ಟೋಲ್ಪ್ಲಾಜಾ ಸಿಬ್ಬಂದಿಯಿಂದ ಕೋವಿ ವಶಕ್ಕೆ

Published On :

ಬಂಟ್ವಾಳ: ಬ್ರಹ್ಮರಕೂಟ್ಲುವಿನ ಟೋಲ್ ಪ್ಲಾಜಾದಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಸೀಲ್ದಾರ್ ಮಲ್ಲೇಸ್ವಾಮಿ, ಸೂಕ್ತ ದಾಖಲೆ ಪತ್ರ ನೀಡದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಶಸ್ತ್ರ ಭದ್ರತಾ ಸಿಬ್ಬಂದಿಯ ಕೋವಿಗಳನ್ನು ವಶಪಡಿಸಿಕೊಂಡಿದ್ದಾರೆ.
ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಇಬ್ಬರು ಗನ್ಮ್ಯಾನ್ಗಳನ್ನು ನೇಮಿಸಿದ್ದರು. ಇದಕ್ಕೆ ಗುತ್ತಿಗೆದಾರರು ಪೊಲೀಸ್ ವರಿಷ್ಠಾಧಿಕಾರಿಯವರಿಂದ ಅನುಮತಿಯನ್ನೂ ಪಡೆದಿದ್ದರು. ಆದರೆ ಶುಕ್ರವಾರ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಇಲ್ಲಿನ ಕರ್ತವ್ಯನಿರತ ಸಿಬ್ಬಂದಿಯನ್ನು ಪರಿಶೀಲಿಸಿದಾಗ ಸೂಕ್ತ ದಾಖಲೆ ಇಲ್ಲದ ಕಾರಣ ಕೋವಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಮಲ್ಲೇಸ್ವಾಮಿ ಪತ್ರಿಕೆಗೆ ತಿಳಿಸಿದ್ದಾರೆ. ಗುತ್ತಿಗೆದಾರರು ತಮ್ಮಲ್ಲಿ ಪರವಾನಗಿ ಇದೆ ಎಂದು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಸಂಬಂಧಪಟ್ಟ ದಾಖಲೆ ಹಾಜರುಪಡಿಸಿದರೆ ಕೋವಿ ವಾಪಸ್  ನೀಡಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.