ದಕ್ಷಿಣ ಕನ್ನಡ

ಉಳ್ಳಾಲ ಖಾಝಿ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ತಂಞಳ್ ನಿಧನ

Published On :

ಮಂಗಳೂರು: ಉಳ್ಳಾಲ ಖಾಝಿ ಶೈಖುನಾ ತಾಜುಲ್ ಉಲಮಾ ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಲ ತಂಞಳ್ ಶನಿವಾರ ಸಂಜೆ ಕೇರಳದ ಪಯ್ಯನ್ನೂರಿನ ಎಟ್ಟಿಕುಲಮ್‌ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.
 ಕಲ್ಲಿಕೋಟೆಯ ಕರುವನ್ ತುರುತ್ತಿಯಲ್ಲಿ ಜನಿಸಿದ ಅವರು, ಹುಟ್ಟೂರಲ್ಲೇ ವಿದ್ಯಾಭ್ಯಾಸ ಪೂರೈಸಿದರು. ತಮಿಳ್ನಾಡಿನ ವೆಲ್ಲೂರುನಲ್ಲಿ ಪದವೀಧರರಾಗಿ ಪ್ರಥಮ ರ್ಯಾಂಕ್ ಪಡೆದಿದ್ದರು. 25 ವರ್ಷ ಕಲಿಕೆಯಿಂದ ವಿದ್ವಾಂಸರಾಗಿ 1952ರಲ್ಲಿ ಉಳ್ಳಾಲಕ್ಕೆ ಆಗಮಿಸಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದರು. 1971ರಂದು ಸಯ್ಯದ್ ಮದನಿ ಅರಬಿಕ್ ಕಾಲೇಜು ಪ್ರಾಂಶುಪಾಲರಾಗಿ ನೇಮಕಗೊಂಡರು. 1978ರಲ್ಲಿ ಉಳ್ಳಾಲ ಖಾಝಿಯಾದರು. ತಂಞಳ್‌ಗೆ ಐವರು ಹೆಣ್ಣು, ಇಬ್ಬರು ಗಂಡು ಮಕ್ಕಳು ಇದ್ದಾರೆ.
ಗಣ್ಯರ ಸಂತಾಪ: ಖಾಝಿ ನಿಧನಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ಯುವಜನ ಸೇವಾ ಕ್ರೀಡಾ ಸಚಿವ ಅಭಯಚಂದ್ರ ಜೈನ್, ಶಾಸಕ ಮೊಯ್ದಿನ್ ಬಾವಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.