ದಕ್ಷಿಣ ಕನ್ನಡ

ಹಿರಿಯಡ್ಕ- ಪೆರ್ಡೂರು ರಸ್ತೆ ಕಾಮಗಾರಿಗೆ ಸೊರಕೆ ಚಾಲನೆ

Published On :

ಹಿರಿಯಡ್ಕ: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಮೊದಲನೇ ಮಹಡಿ ನಿರ್ಮಾಣಕ್ಕೆ ರು. 1 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ, ರು. 4.32 ಕೋಟಿ ವೆಚ್ಚದಲ್ಲಿ ಹಿರಿಯಡ್ಕ- ಪೆರ್ಡೂರು ರಸ್ತೆಯ ಫೇವರ್ ಫಿನಿಶ್ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ವಿನಯಕುಮಾರ್ ಸೊರಕೆ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಈ ಪ್ರದೇಶ ವ್ಯಾಪ್ತಿಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಹಿರಿಯಡ್ಕ ಪ.ಪೂ. ಕಾಲೇಜಿನಲ್ಲಿ ಅಕ್ಷರ ದಾಸೋಹ ಕಟ್ಟಡ ಸೇರಿದಂತೆ 6 ಕಟ್ಟಡಗಳ ನಿರ್ಮಾಣಕ್ಕೆ ರು. 60 ಲಕ್ಷ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಹಿರಿಯಡ್ಕದಲ್ಲಿ ನೂತನ ನಾಡ ಕಚೇರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರದೇಶದಲ್ಲಿ 7 ಸಾವಿರ ಜನರಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. ಪಿಂಚಣಿ ಅದಾಲತ್ ಮೂಲಕ 1000 ಮಂದಿಗೆ ಪಿಂಚಣಿ ನೀಡಲಾಗಿದೆ. 1 ಕೋಟಿ ವೆಚ್ಚದಲ್ಲಿ ವಿವಿಧ ಸಮುದಾಯಗಳ ಭವನಗಳನ್ನು ನಿರ್ಮಾಣ ಮಾಡುವುದರ ಮೂಲಕ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಹಿರಿಯಡ್ಕ- ಕಾರ್ಕಳ ರಸ್ತೆ ಫೇವರ್ ಫಿನಿಶ್ ಕಾಮಗಾರಿಗೆ 5 ಕೋಟಿ ಮಂಜೂರಾಗಿದ್ದು, ಟೆಂಡರ್ ಕರೆದು ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು, ಹಿರಿಯಡ್ಕ ಸೇರಿದಂತೆ ಕಾಪು ಕ್ಷೇತ್ರದ ಅಭಿವೃದ್ಧಿಗೆ ಈ ವರ್ಷ ಒಟ್ಟು 20 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ಪಡೆಯಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ  ಅಧ್ಯಕ್ಷ ಉಪೇಂದ್ರ ನಾಯಕ್, ಉಡುಪಿ ತಾಪಂ ಉಪಾಧ್ಯಕ್ಷ ರಾಮ ಕುಲಾಲ್, ಸ್ಥಳೀಯ ಜಿಪಂ ಸದಸ್ಯೆ ಗೋಪಿ ನಾಯ್ಕ್, ತಾಪಂ ಸದಸ್ಯರಾದ ಸವಿತಾ ನಾಯಕ್, ಸತ್ಯಾನಂದ ನಾಯಕ್, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಸುರೇಶ್ ನಾಯಕ್, ಕೋಡಿಬೆಟ್ಟು ಗ್ರಾಪಂ ಅಧ್ಯಕ್ಷೆ ಸಂಧ್ಯಾ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.