ಸಣ್ಣ ಪತ್ರಿಕೆಗಳಿಂದ ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ: ನಾ.ಕಾರಂತ ಪೆರಾಜೆ
ಪುತ್ತೂರು: ಸಣ್ಣ ಪತ್ರಿಕೆಗಳು ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದು ಸಣ್ಣ ಪತ್ರಿಕೆಗಳನ್ನು ಓದುಗರು ಬೆಂಬಲಿಸಬೇಕು ಎಂದು ಅಡಿಕೆ ಪತ್ರಿಕೆ ಪತ್ರಕರ್ತ ಹಾಗೂ ಕೃಷಿ ಅಂಕಣಕಾರ ನಾ. ಕಾರಂತ ಪೇರಾಜೆ ಹೇಳಿದರು.
ಅವರು ಸೋಮವಾರ ಪುತ್ತೂರಿನ ಬೊಳುವಾರು ಇಂಡಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಏರ್ಪಡಿಸಲಾದ ಕಲಾದರ್ಶನ ದತ್ತಿ ಉಪನ್ಯಾಸ ಮಾಲೆಯಲ್ಲಿ 'ಕನ್ನಡದ ಸಣ್ಣ ಪತ್ರಿಕೆಗಳು ಮತ್ತು ಸಾಹಿತ್ಯ ವಿಷಯದ ಬಗ್ಗೆ ಉಪಸ್ಯಾಸ ನೀಡಿದರು. ಸಣ್ಣ ಪತ್ರಿಕೆಗಳು ಎಂದೂ ಸಮಾಜವನ್ನು ತಪ್ಪುದಾರಿಗೆ ಎಳೆಯುವ ಕೆಲಸ ಮಾಡಲಾರದು' ಎಂದ ಅವರು ಓದುಗರ ಸಂಖ್ಯೆ ಕಡಿಮೆಯಾಗುತ್ತಿರುವುದು ಸಣ್ಣ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿದೆ ಎಂದು ಹೇಳಿದರು.
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ವರದರಾಜ ಚಂದ್ರಗಿರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಡಸ್ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಇಂಡಸ್ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ರಾಜೇಶ್ ಬೆಜ್ಜಂಗಳ ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಸೈಫುಲ್ಲಾ ವಂದಿಸಿದರು. ವಿದ್ಯಾಥರ್ ಮಹಮ್ಮದ್ ಮನ್ಸೂರ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

