'ವೆನ್ಲಾಕ್ ರಕ್ತಕ್ಕೆ ಖಾಸಗಿ ಆಸ್ಪತ್ರೆಗಳ ನಕಾರ'
ಬೆಳ್ತಂಗಡಿ: ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯಿಂದ ತರಲಾದ ರಕ್ತವನ್ನು ತಿರಸ್ಕರಿಸಲಾಗುತ್ತದೆ. ಇದರ ಬಗ್ಗೆ ಗಮನ ಹರಿಸಬೇಕೆಂದು ಬೆಳ್ತಂಗಡಿ ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಮಂಗಳವಾರ ನಡೆದ ಬೆಳ್ತಂಗಡಿ ನಗರ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದ್ದಾರೆ.
ನ.ಪಂ. ಅಧ್ಯಕ್ಷೆ ಮುಸ್ತರ್ಜಾನ್ ಮೆಹಬೂಬ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯಕ್ಕೆ ಸಂಬಂಧಿಸಿ ಚರ್ಚೆ ನಡೆಸಿದ ಸದಸ್ಯರು ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡುವುದಲ್ಲದೆ, ಜಿಲ್ಲಾ ಆರೋಗ್ಯಾಧಿಕಾರಿಗೆ ಪತ್ರ ಬರೆಯುವ ಕುರಿತು ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು.
ಹೋಟೆಲ್ಗಳು, ಇನ್ನಿತರ ಮಳಿಗೆಗಳಿಂದ ತ್ಯಾಜ್ಯಗಳನ್ನು ಚರಂಡಿಗಳಿಗೆ ಬಿಡಬಾರದು ಎಂದು ಸಭೆಯಲ್ಲಿ ವಿಷಯ ಪ್ರಸ್ತಾಪವಾಯಿತು. ತ್ಯಾಜ್ಯದ ಬಗ್ಗೆ ನಗರದಲ್ಲಿ ಬಹುತೇಕ ಕಡೆ ಅನುಷ್ಠಾನಗೊಂಡಿದೆ. ಉಳಿದ ಕೆಲವು ಕಡೆಗಳಿಗೆ ನೋಟೀಸ್ ನೀಡಲಾಗುವುದೆಂದು ತೀರ್ಮಾನಿಸಲಾಯಿತು.
4 ಕೊಳವೆ ಬಾವಿ: ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ನಗರದಲ್ಲಿ ಹೊಸತಾಗಿ 4 ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಸಿಕ್ಕಿದೆ. ಈ ಸಂಬಂಧ ಕೆಲಸವನ್ನು ಶೀಘ್ರ ಆರಂಭಿಸಲಾಗುವುದು ಎಂದು ನಗರ ಪಂಚಾಯಿತಿ ಮುಖ್ಯಧಿಕಾರಿಗಳಾದ ಜೇಸಿಂತಾ ಲೂಯಿಸ್ ತಿಳಿಸಿದರು.
ನಗರ ಪಂಚಾಯಿತಿ ಉಪಾಧ್ಯಕ್ಷೆ ನಳಿನಿ ವಿಶ್ವನಾಥ್, ನಗರ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

