ಸುದ್ದಿ ಸಂಕ್ಷೇಪ
ಇಂದಿನಿಂದ ಉಚಿತ ಸರ್ಜರಿ
ಮಂಗಳೂರು: ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಫೆ.10ರಿಂದ 28ರ ವರೆಗೆ ಉಚಿತ ಲ್ಯಾಪ್ರೋಸ್ಕೋಪಿಕ್ ಸರ್ಜರಿ ಕ್ಯಾಂಪ್ ನಡೆಯಲಿದೆ. ಬೆಳಗ್ಗೆ 8.30ರಿಂದ ಸಂಜೆ 5ರ ಅವಧಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಬಹುದು. ಮಾ.1 ಮತ್ತು 2ರಂದು ಗೈನೆಕಾಲಜಿ ಮತ್ತು ಯುರಾಲಜಿ ಸರ್ಜರಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಪ್ಪಿನಂಗಡಿ: ಇಂದು ಆಧಾರ್ ಸೇವೆ ಅಂತ್ಯ
ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಧಾರ್ ಕೇಂದ್ರ ಸೋಮವಾರ ತನ್ನ ಸೇವೆಯನ್ನು ಕೊನೆಗಾಣಿಸಲಿದೆ. ಎಲ್ಪಿಜಿಗೆ ಆಧಾರ್ ಕಾರ್ಡ್ ಕಡ್ಡಾಯ ಎಂಬ ಸರ್ಕಾರದ ನಿಲುವು ಸಡಿಲಿಕೆಯಾದ ಬಳಿಕ ಜನಸಾಮಾನ್ಯರು ಆಧಾರ್ ಕಾರ್ಡ್ಗಾಗಿ ಮುಗಿ ಬೀಳುವುದು ನಿಂತ ಹಿನ್ನೆಲೆಯಲ್ಲಿ ಆಧಾರ ಕೇಂದ್ರದಲ್ಲಿ ಆಧಾರ್ ನೋಂದಣಿ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹೋಬಳಿ ಕೇಂದ್ರವಾದ ಉಪ್ಪಿನಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಧಾರ ಕೇಂದ್ರವನ್ನು ಫೆ.10ರಂದು ಕೊನೆಯ ಸೇವೆ ನೀಡಿದ ಬಳಿಕ ಸಮೀಪದ ಬೆಳ್ತಂಗಡಿಗೆ ವರ್ಗಾಯಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಇಂದು ಹೊರೆಕಾಣಿಕೆ ಸಮರ್ಪಣೆ
ಉಪ್ಪಿನಂಗಡಿ: ಇತಿಹಾಸ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಾರ್ಷಿಕ ಮಖೆ ಜಾತ್ರಾ ಮಹೋತ್ಸವವು 10 ರಿಂದ ಪ್ರಾರಂಭಹೊಳ್ಳಲಿದ್ದು, 10ರಂದು ಸೋಮವಾರ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ವರ್ಷಾವಧಿ ಉತ್ಸವದ ಅಂಗವಾಗಿ ದೇವಾಲಯದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ತಿಳಿಸಿದ್ದಾರೆ.
ಇಂದಿನಿಂದ ಉರೂಸ್
ಸುಳ್ಯ: ಐವತ್ತೊಕ್ಲು ಗ್ರಾಮದ ಎಣ್ಮೂರು-ಐವತ್ತೊಕ್ಲು ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ನಲ್ಲಿ ಉರೂಸ್ ಸಮಮಾರಂಭ ಹಾಗೂ 6 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಎಣ್ಮೂರು ಜುಮಾ ಮಜ್ಜಿದ್ ವಠಾರದಲ್ಲಿ 10ರಿಂದ 15ರ ತನಕ ನಡೆಯಲಿದೆ ಎಂದು ಮಸೀದಿ ಗೌರವಾಧ್ಯಕ್ಷ ಪಿ. ಕುಂಞಪಳ್ಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

