ದಕ್ಷಿಣ ಕನ್ನಡ

ದುರಸ್ತಿ ಆಗ್ರಹಿಸಿ ಇಂದು ರಸ್ತೆ ತಡೆ, ಪ್ರತಿಭಟನೆ

Published On :

ಪುತ್ತೂರು: ಪುತ್ತೂರಿನ ಗಡಿ ಪ್ರದೇಶದ ಮುಡಿಪಿನಡ್ಕ, ಮೈಂದನಡ್ಕ, ಸುಳ್ಯಪದವು ರಸ್ತೆ ಸಂಪೂರ್ಣ ನಾದುರಸ್ತಿಯಲ್ಲಿದ್ದು  ಈ ರಸ್ತೆ ಮರುಡಾಂಬರೀಕರಣ ಆಗ್ರಹಿಸಿ ಬುಧವಾರ ಮುಡಿಪಿನಡ್ಕ ಮತ್ತು ಪದಡ್ಕದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಪಡುಮಲೆ ನಾಗರಿಕ ಹೋರಾಟ ಸಮಿತಿ ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಕೆ.ಎಂ. ನಾಗರಾಜ ಭಟ್ ಸಜಂಕಾಡಿ, ರವೀಶ್ ಪಡುಮಲೆ ಮತ್ತು ಚಂದ್ರಶೇಖರ ಆಳ್ವ ಪಡುಮಲೆ , ಕೇರಳ-ಕರ್ನಾಟಕವನ್ನು ಸಂಪರ್ಕಿಸುವ ಮುಡಿಪಿನಡ್ಕ, ಮೈಂದನಡ್ಕ, ಸುಳ್ಯಪದವು ರಸ್ತೆ ಕಳೆದ 35 ವರ್ಷಗಳಿಂದ ಡಾಂಬರೀಕರಣಗೊಂಡಿಲ್ಲ. ಈ ಬಗ್ಗೆ ಸ್ಥಳೀಯ ಸಂಸದರು ಮತ್ತು ಶಾಸಕರಿಗೆ ನಿರಂತರ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯಲ್ಲಿ ಗುಂಡಿಗಳು ತುಂಬಿದ್ದು ಕೆಲವೊಮ್ಮೆ ಸಾರ್ವಜನಿಕರು ಹೋರಾಟ ನಡೆಸಿದಾಗ ಗುಂಡಿ ಮುಚ್ಚುವ ಕಾಮಗಾರಿ ನಡೆದಿದ್ದರೂ ಅದು ಕೆಲವೇ ದಿನಗಳಲ್ಲಿ ಮೊದಲಿಂತಾಗುತ್ತದೆ. ಈ ರಸ್ತೆಗೆ ಮರು ಡಾಂಬರೀಕರಣ ಅಗತ್ಯವಿದ್ದು ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳು ಲಿಖಿತ ಭರವಸೆ ನೀಡಬೇಕು. ಅವರು ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಹಾಗೂ ಲೋಕಸಭಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.