ದಕ್ಷಿಣ ಕನ್ನಡ

ನೀತಿ ಸಂಹಿತೆ ಉಲ್ಲಂಘನೆ; ಸುನಿಲ್ ಕುಮಾರ್‌ಗೆ ನೋಟಿಸ್: ಆರೋಪ

Published On :

ಉಡುಪಿ: ರಾಜ್ಯದ ವಿಪಕ್ಷ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ರಾಜ್ಯ ಚುನಾವಣಾ ಆಯೋಗವು ಉಡುಪಿ ತಹಸೀಲ್ದಾರ್ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ನೋಟಿಸ್ ಜಾರಿಗೊಳಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಕಾರ್ಕಳ ಪುರಸಭೆ ಸದಸ್ಯ, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸುನಿಲ್ ಕುಮಾರ್ ಅವರು ಚುನಾವಣಾ ಆಯೋಗ ನಿಯಮಗಳನ್ನು ಉಲ್ಲಂಘಿಸಿ, ತಮ್ಮ ಪ್ರಚಾರ ಪತ್ರಗಳಲ್ಲಿ ಹಿಂದೂ ಧರ್ಮ, ದೇವರಾದ ಭಗವಾನ್ ಬಾಹುಬಲಿ, ಸಂತ ಲಾರೆನ್ಸ್ ಚರ್ಚ್, ಕೋಟಿ ಚೆನ್ನಯ, ದೈವಗಳ ಗರೋಡಿಗಳ ಹೆಸರುಗಳನ್ನು, ಫೊಟೋಗಳನ್ನು ಮುದ್ರಿಸಿ ವಿತರಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಥಳೀಯ ಚುನಾವಣಾಧಿಕಾರಿ ತಹಸೀಲ್ದಾರ್ ಅವರಿಗೆ ದೂರು ಸಲ್ಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ನಡೆದಿರಲಿಲ್ಲ. ಚುನಾವಣೆಯ ನಂತರ ಶುಭದ ರಾವ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಅಲ್ಲಿಂದ ಮುಖ್ಯ ಚುನಾವಣಾಧಿಕಾರಿ, ಅವರಿಂದ ಉಡುಪಿ ಜಿಲ್ಲಾಧಿಕಾರಿಗೆ, ಅವರಿಂದ ಕುಂದಾಪುರ ಉಪವಿಭಾಗಾಧಿಕಾರಿಗೆ, ಅವರಿಂದ ಕಾರ್ಕಳ ತಹಸೀಲ್ದಾರ್ ನಡುವೆ ಪತ್ರ ವ್ಯವಹಾರಗಳು ನಡೆದು, ಇದೀಗ ತಹಸೀಲ್ದಾರ್ ಅವರು ಶಾಸಕರಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಶುಭದಾ ರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಶೆಟ್ಟಿ, ಕುಂದಾಪುರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಜಿತ್ ಹೆಗ್ಡೆ, ಕಾರ್ಕಳ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುಹಾಸ್ ಕಾವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.