ದಕ್ಷಿಣ ಕನ್ನಡ

ಮಹಾತ್ಮರನ್ನು ನೆನಪಿಸುವುದು ಪ್ರೀತಿಯ ಸಂಕೇತ: ಉಮಾಶ್ರೀ

Published On :

ಮಂಗಳೂರು: ಇತಿಹಾಸದಲ್ಲಿ ದೇಶಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸುವುದು ಕೇವಲ ಸರ್ಕಾರದ ಕೆಲಸವಾಗಿರದೆ, ಜನರು ಮಣ್ಣಿನ ಮಕ್ಕಳಾಗಿ ನೆನಪಿಸುವುದು ಪ್ರೀತಿಯ ಸಂಕೇತ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.
 ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಮುಡಿಪು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 11ನೇ 'ವೀರರಾಣಿ ಅಬ್ಬಕ್ಕ ಉತ್ಸವ-2014' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 ಇತಿಹಾಸದ ಮಹಾಪುರುಷರನ್ನು ಪುನರುಚ್ಚರಿಸುವ ಕೆಲಸ ಆಗಬೇಕಾಗಿದೆ.  ಮುಂದಿನ ಪೀಳಿಗೆ ಅವರನ್ನು ನೆನಪಿಸುವಂತೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಇದೇ ಸಂದರ್ಭ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
 ನಂತರ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಸಮಾಜದಲ್ಲಿ ಬದುಕುವ ರೀತಿಯನ್ನು ತಿಳಿಯಲು ಹಿರಿಯರ ಮಾರ್ಗದರ್ಶನ ಅಗತ್ಯ. ಎಲ್ಲರೂ ಜಾತಿ ಮತ ಮರೆತು ಸಂಸ್ಕೃತಿ, ಒಗ್ಗಟ್ಟನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡಬೇಕು.
 ಅಬ್ಬಕ್ಕ ಉತ್ಸವಕ್ಕೆ ಮುಖ್ಯಮಂತ್ರಿಯವರು ರು. 35 ಲಕ್ಷ ಅನುದಾನ ನೀಡಿದ್ದಾರೆ. ಸರ್ಕಾರದೊಂದಿಗೆ ಇತರ ಸಂಘ ಸಂಸ್ಥೆಗಳು ಅಬ್ಬಕ್ಕ ರಾಣಿ ಉತ್ಸವನ್ನು ಅದ್ದೂರಿಯಿಂದ ನಡೆಸುತ್ತಾ ಬಂದಾಗ, ಹಂಪಿ ಉತ್ಸವದಂತೆ ಜನಪ್ರಿಯಗೊಳ್ಳುವ ನಂಬಿಕೆಯಿದೆ ಎಂದರು.
 ಸಭೆಯಲ್ಲಿ ಸ್ತ್ರೀರೋಗ ತಜ್ಞೆ ಡಾ. ರತಿದೇವಿ, ಜಾನಪದ ಕಲಾವಿದೆ ತಿಮ್ಮು ರಾಣಿಪುರ, ಕಾಲೇಜಿನ ಪ್ರಾಂಶುಪಾಲ ಬಸವರಾಜ್ ಪಲ್ಲಕ್ಕಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಮಮತಾ ಗಟ್ಟಿ ಇದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.