ಹಿಂದುಳಿದವರಿಗೆ ಸಾಲ ಸೌಲಭ್ಯ: ಡಾ.ಸುಧಾಮೂರ್ತಿ ಆಶಯ
ಮಂಗಳೂರು: ರಾಯಚೂರಿನಲ್ಲಿ ಬ್ಯಾಂಕ್ಗಳು ದೇವದಾಸಿಯರಿಗೆ ಸಾಲ ಸೌಲಭ್ಯ ನೀಡಿ ಅವರಿಗೆ ವೃತ್ತಿ ಮತ್ತು ಪುನರ್ವಸತಿಗೆ ಸಹಾಯ ಮಾಡಿವೆ. ಈಗ ರಾಯಚೂರಿನಲ್ಲಿ ಆ ಸಾಮಾಜಿಕ ಅನಿಷ್ಟ ದೂರವಾಗಿದೆ. ಕರ್ಣಾಟಕ ಬ್ಯಾಂಕ್ ಕೂಡ ಸಮಾಜದಲ್ಲಿ ಹಿಂದುಳಿದವರಿಗೆ ಇನ್ನಷ್ಟು ಸಾಲ ಸೌಲಭ್ಯಕ್ಕೆ ನೆರವಾಗಬೇಕು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಪದ್ಮಶ್ರೀ ಡಾ.ಸುಧಾಮೂರ್ತಿ ಹೇಳಿದ್ದಾರೆ.
ಅವರು ಮಂಗಳವಾರ ಮಂಗಳೂರಿನ ಕರ್ಣಾಟಕ ಬ್ಯಾಂಕ್ನ ಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದರು. ಮನುಷ್ಯರಿಗೆ ಹಣ ಮುಖ್ಯವಲ್ಲ ಪರೋಪಕಾರ, ಅನುಕಂಪದ ಹೃದಯ ಇರಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಮತ್ತು ಮನಃಪೂರ್ವಕವಾಗಿ ಹೂಡಿಕೆ ಮಾಡುವ ಇರಾದೆ ಇರಬೇಕು. ಸರಿಯಾದ ಸಮಯ, ಸಂದರ್ಭದಲ್ಲಿ ಪರೋಪಕಾರ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಬ್ಯಾಂಕಿನ ಅಧ್ಯಕ್ಷ ಅನಂತಕೃಷ್ಣ ಭಟ್ ಇದ್ದರು. ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ಸ್ವಾಗತಿಸಿದರು. ಸಿಜಿಎಂ ಮಹಾಬಲೇಶ್ವರ ಭಟ್ ವಂದಿಸಿದರು. ಆ ಬಳಿಕ ವಿದುಷಿ ಬಾಂಬೈ ಜಯಶ್ರೀ ಬಳಗದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

