ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಡಿಕೇರಿ: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಮೂವರು ವ್ಯಕ್ತಿಗಳನ್ನು ಗುರುತಿಸಿ ರಾಜೀವ್‌ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಿ ಗೌರವಿಸಲಿದ್ದು, ಅರ್ಜಿ ಆಹ್ವಾನಿಸಿದೆ.
ಈ ಪ್ರಶಸ್ತಿಯನ್ನು ಪ್ರತಿವರ್ಷ ರಾಜೀವ್ ಗಾಂಧಿ ಜನ್ಮದಿನವಾದ ಆ.20ರಂದು ಪ್ರದಾನ ಮಾಡಲಾಗುವುದು. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರು. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಈ ಪ್ರಶಸ್ತಿಗಾಗಿ ಆಯ್ಕೆಯಾಗುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯ ನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ- ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಗುಣಮಟ್ಟ. ಅದೇ ರೀತಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಅಸಾಧಾರಣ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರು. 1 ಲಕ್ಷ ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರು. 3 ಲಕ್ಷ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ.
ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಂತಾ ಕಾಂಪ್ಲೆಕ್ಸ್, ಓಂಕಾರೇಶ್ವರ ದೇವಸ್ಥಾನ ರಸ್ತೆ, ಕೊಡಗು ಜಿಲ್ಲೆ (ದೂರವಾಣಿ 08272 -228010) ಅವರಿಗೆ ಸಲ್ಲಿಸತಕ್ಕದ್ದು. ಮಾ.15 ಕೊನೆಯ ದಿನ ಎಂದು ಮಡಿಕೇರಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಪ ನಿರ್ದೇಶಕಿ ಜಯಶೀಲ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

