ಪುತ್ತೂರು: ಗಾಂಧೀಜಿ ಭೇಟಿ 80ನೇ ವರ್ಷಾಚರಣೆ
ಪುತ್ತೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 1934ರ ಫೆ.24ರಂದು ಪುತ್ತೂರಿನ ಬಸ್ ನಿಲ್ದಾಣದ ಬಳಿಯಲ್ಲಿರುವ ಆಲದ ಮರದ ಅಡಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಈ ನೆನಪಿಗಾಗಿ ಸೋಮವಾರ ಇಲ್ಲಿರುವ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರ ಹಾಕಿ ಗೌರವಿಸಲಾಯಿತು. ಪುತ್ತೂರಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಎಂ.ಟಿ. ಕುಳ್ಳೇಗೌಡ ಗಾಂಧಿ ಪ್ರತಿಮೆಗೆ ಹಾರ ಹಾಕಿದರು.
ಗಾಂಧಿಕಟ್ಟೆ ಸಮಿತಿ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಉಪಾಧ್ಯಕ್ಷ ರಮೇಶ್ ಬಾಬು, ಪದಾಧಿಕಾರಿಗಳಾದ ಸೀತಾರಾಮ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಸೇವಾದಳದ ತಾಲೂಕು ಸಂಘಟಕ ಜೋಕಿಂ ಡಿ ಸೋಜ ಇದ್ದರು.
ವಿಕಲಾಂಗತೆ ಪ್ರಮಾಣ ಪತ್ರ ವಿತರಣೆ ಸೌಲಭ್ಯ
ಬೆಳ್ತಂಗಡಿ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಎರಡನೇ ಗುರುವಾರ ಎಲುಬು ಮತ್ತು ಕೀಲು, ಕಣ್ಣು ಮತ್ತು ಕಿವಿ, ಗಂಟಲು, ಮೂಗು ಇದಕ್ಕೆ ಸಂಬಂಧಿಸಿದ ತಜ್ಞ ವೈದ್ಯರಿಂದ ವಿಕಲಾಂಗತೆ ಪ್ರಮಾಣವನ್ನು ಗುರುತಿಸಿ ಪ್ರಮಾಣ ಪತ್ರ ನೀಡುವ ಸೌಲಭ್ಯ ಪ್ರಾರಂಭಿಸಲಾಗಿದೆ ಎಂದು ಆಡಳಿತ ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಅಗತ್ಯ ಉಳ್ಳವರು ಇದುವರೆಗೆ ಮಂಗಳೂರು ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಹೋಗಿ ಪಡೆದುಕೊಳ್ಳಬೇಕಾಗಿದ್ದ ಸೌಲಭ್ಯ ಇಲ್ಲೇ ಪಡೆಯುವಂತಾಗಿದ್ದು, ಜನಪ್ರತಿನಿಧಿಗಳು ಮತ್ತು ಅಂಗವಿಕಲರ ಸಂಘದ ಬೇಡಿಕೆಯ ಆಧಾರದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ.
27ರಂದು ಸ್ವಚ್ಛತಾ ಅಭಿಯಾನ ಪ್ರಸಾರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಸಲಾಗುತ್ತಿರುವ ಬೃಹತ್ ಸ್ವಚ್ಛತಾ ಅಭಿಯಾನ ಮತ್ತು ಜ.26ರಂದು ಧರ್ಮಸ್ಥಳದಲ್ಲಿ ನಡೆದ ಬೃಹತ್ ಆಂದೋಲನ ಮತ್ತು ಚಿಕ್ಕಮಗಳೂರು ನಗರದಲ್ಲಿ ಯೋಜನೆ ನಡೆಸುತ್ತಿರುವ ಘನತ್ಯಾಜ್ಯ ವಿಲೇವಾರಿ ಕುರಿತು ಕಾರ್ಯಕ್ರಮ ಫೆ.27ರಂದು ರಾತ್ರಿ 9.30ಕ್ಕೆ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಉಪ್ಪಿನಂಗಡಿ ದೇವಾಲಯ ಪ್ರತಿಷ್ಠಾ ಮಹೋತ್ಸವ
ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಸೋಮವಾರ ಗಣಪತಿ ಹವನ, ಶತರುದ್ರಾಭಿಷೇಕ ಹಾಗೂ ಚಂಡಿಕಾ ಹೋಮ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ನೂರಾರು ಭಕ್ತರು ಭಾಗವಹಿಸಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರಾದ ಧನ್ಯಕುಮಾರ್ ರೈ, ಕಂಗ್ವೆ ವಿಶ್ವಾನಾಥ ಶೆಟ್ಟಿ, ಹರಿರಾಮಚಂದ್ರ, ಸುಂದರ ಗೌಡ, ಸುನಿಲ್, ಉಷಾ ಮುಳಿಯ, ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು.
ಪೆರಾಜೆ: ಮಾ.28ರಿಂದ ಗೌಡ ಕಪ್ ಕ್ರಿಕೆಟ್
ಸುಳ್ಯ: ಗೌಡರ ಯುವ ಸೇವಾ ಸಂಘ ಸುಳ್ಯ ಗ್ರಾಮ ಸಮಿತಿ ಪೆರಾಜೆ ಆಶ್ರಯದಲ್ಲಿ ಗೌಡ ಕಪ್ ಕ್ರಿಕೆಟ್ ಹಬ್ಬ ಮಾ.28ರಿಂದ ಏ.5ರವರೆಗೆ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಕಾವೇರಿ ಗದ್ದೆಯಲ್ಲಿ ನಡೆಯಲಿದೆ. ಪಂದ್ಯಾಟಕ್ಕೆ ಕುಟುಂಬಗಳು ಹೆಸರು ನೋಂದಾಯಿಸಬಹುದು ಎಂದು ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ, ಸಲಹೆಗಾರ ದೊಡ್ಡಣ್ಣ ಬರೆಮೇಲು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೆರಾಜೆ ಸಮಿತಿ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ಕಾರ್ಯದರ್ಶಿ ಪ್ರವೀಣ ಬಂಗಾರಕೋಡಿ, ಕ್ರೀಡಾ ಸಂಚಾಲಕ ರಕ್ಷಿತ್ ಬಂಗಾರಕೋಡಿ, ಸಹಸಂಚಾಲಕ ಪುಂಡರೀಕ ಮಜಿಕೋಡಿ, ಸಮಿತಿಯ ರೋಹಿತ್ ಬಂಗಾರಕೋಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

