ದಕ್ಷಿಣ ಕನ್ನಡ

ವ್ಯಕ್ತಿ ಆತ್ಮಹತ್ಯೆ

Published On :

ಮಂಗಳೂರು: ಉಳ್ಳಾಲ ದರ್ಗಾದ ಬಳಿಯ ಕಟ್ಟಡದಲ್ಲಿ ಕಣ್ಣೂರು ಮೂಲದ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ದರ್ಗಾಕ್ಕೆ ಕೆಲಸ ಕೊಡುವಂತೆ ಕೇಳಿಕೊಂಡ ಬಂದಿದ್ದು, ತಂಗಲು ಕಟ್ಟಡದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಬುಧವಾರ ಮಧ್ಯಾಹ್ನ ರೂಂ ಗಮನಿಸಿದಾಗ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶವ ಪತ್ತೆಗೆ ಸೂಚನೆ
ಮಂಗಳೂರು: ವೆನ್‌ಲಾಕ್ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಅಪರಿಚಿತ ಶವಗಳಿದ್ದು, ಸಂಬಂಧಪಟ್ಟ ವಾರಿಸುದಾರರು 3 ದಿನದೊಳಗೆ ಸಂಪರ್ಕಿಸುವಂತೆ ವೈದ್ಯಾಧಿಕಾರಿ ಹೇಳಿದ್ದಾರೆ. ಅಜಯ್ ಸಿಂಗ್(50), ವೆಂಕಟರಮಣ ರೆಡ್ಡಿ(78), ಅಂಬರೀಶ್(28) ಇತ್ತೀಚೆಗೆ ಒಳರೋಗಿಗಳಾಗಿ ದಾಖಲಾಗಿದ್ದರು.

ಪಾದಚಾರಿಗೆ ಹಲ್ಲೆ: ದೂರು
ಉಪ್ಪಿನಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪೇಟೆಯಲ್ಲಿ ನಡೆದಿದೆ. ಪದ್ಮುಂಜ ಕಾಲೋನಿ ನಿವಾಸಿ ಅಣ್ಣು(54ವ.)ಎಂಬವರ ಮೇಲೆ ಇನ್ನೊಬ್ಬ ಅಣ್ಣು ಎಂಬಾತ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ವರದಿಯಾಗಿದೆ.  ಅಣ್ಣು ಪದ್ಮುಂಜ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಸ್ಥಳೀಯ ನಿವಾಸಿ ಅಣ್ಣು ಎಂಬಾತ ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು ಕೈಯಿಂದ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.  ಗಾಯಾಳು ಅಣ್ಣುರವರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ನಾಪತ್ತೆ
ಹೆಬ್ರಿ: ಬ್ರಹ್ಮಾವರ ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿದ್ದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ಕಾಣೆಯಾದ ಘಟನೆ ಸೋಮವಾರ ನಡೆದಿದೆ. ಕಾಣೆಯಾದವರು ಮಂಜುನಾಥ ಕುಲಾಲ್ (60).  ಇವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಬ್ರಹ್ಮಾವರದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಇದುವರೆಗೆ ಬಾರದೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿನ್ನಾಭರಣ ಕಳವು
ಕುಂದಾಪುರ: ಕಸಬಾ ಗ್ರಾಮದ ಸಿದ್ದನಾಯ್ಕನ ರಸ್ತೆ ಬದಿಯಲ್ಲಿರುವ ವನಿತಾ ಎಂಬವರ ಮನೆಗೆ ನುಗ್ಗಿದ ಕಳ್ಳರು ನಗದನ್ನು ಕಳವು ಮಾಡಿರುವ ಪ್ರಕರಣ ಬುಧವಾರ ನಡೆದಿದೆ. ಕಳವಾದ ಚಿನ್ನಾಭರಣಗಳ ಒಟ್ಟು ಮೊತ್ತ ಸುಮಾರು 1 ಲಕ್ಷ ರುಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಜುಗಾರಿ: ಆರೋಪಿ ಬಂಧನ
ಕುಂದಾಪುರ: ಇಲ್ಲಿನ ಸಿಂಧೂರ ಬಾರ್ ಬಳಿ ಆರೋಪಿ ಶಾಂತರಾಮ ಶೆಟ್ಟಿ ಎಂಬವರು ಮಟ್ಕಾ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.  ಬಂಧಿತರಿಂದ ರು. 490  ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.