ಸುಬ್ರಹ್ಮಣ್ಯ: ಇಂದು ಅಂತರ್ಜಾಲ ತಾಣ, ಇ-ಸೇವೆ ಉದ್ಘಾಟನೆ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಮಾಹಿತಿಯ ವೆಬ್ಸೈಟ್ ಅನಾವರಣ ಮತ್ತು ಇ- ಸೇವೆಗಳ ಲೋಕಾರ್ಪಣೆ ಫೆ.28ರಂದು ನೆರವೇರಲಿದೆ. ಶುಕ್ರವಾರ ನಡೆಯುವ ಸಮಾರಂಭದಲ್ಲಿ ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಭಕ್ತಾದಿಗಳ ಅನುಕೂಲತೆಗಾಗಿ ನಿರ್ಮಿತ ವ್ಯವಸ್ಥೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ ತಿಳಿಸಿದ್ದಾರೆ. ಶುಕ್ರವಾರ ದೇವಳದ ಧರ್ಮಸಮ್ಮೇಳನ ಮಂಟಪದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್. ಅಂಗಾರ ವಹಿಸಲಿದ್ದಾರೆ. ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಆರೋಗ್ಯ ಸಚಿವ ಯು.ಟಿ. ಖಾದರ್, ಯುವಜನ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಜಿಪಂ ಅಧ್ಯಕ್ಷ ಕೊರಗಪ್ಪ ನಾಯ್ಕ್, ಸಂಸದ ನಳೀನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿದ್ದಾರೆ. ಜಿಪಂ ಸದಸ್ಯ ಕೆ.ಎಸ್. ದೇವರಾಜ್, ತಾಪಂ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ತಾ ಪಂ ಸದಸ್ಯೆ ವಿಮಲಾ ರಂಗಯ್ಯ, ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ದೇವರಗದ್ದೆ ವಿಶೇಷ ಆಹ್ವಾನಿತರಾಗಿರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

