ಪುತ್ತೂರು: ನಾಳೆ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ
ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ 22ನೆ ವರ್ಷದ ಕೋಟಿಚೆನ್ನಯ ಜೋಡುಕರೆ ಕಂಬಳ ಭಾನುವಾರ ನಡೆಯಲಿದೆ.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮ ವಿವರ ನೀಡಿದರು. ಈ ಬಾರಿ ನ್ಯಾಷನಲ್ ಜಿಯಾಗ್ರಫಿ ಚಾನೆಲ್ ಕಂಬಳವನ್ನು ಚಿತ್ರೀಕರಿಸಲಿದ್ದು, ಇಲ್ಲಿನ ಸಂಸ್ಕೃತಿ, ಕ್ರೀಡೆ ಮೊದಲಾದ ವಿಚಾರಗಳ ಕುರಿತು ಚಾನೆಲ್ ವರದಿ ಮಾಡಲಿದೆ. ಚಿತ್ರೀಕರಣಕ್ಕಾಗಿ ವಿಶೇಷ ಹೆಲಿಕಾಫ್ಟರ್ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಜಯಕರ್ನಾಟಕ ಸಂಘಟನೆ ಸ್ಥಾಪಕ ಎನ್. ಮುತ್ತಪ್ಪ ರೈ ನೇತೃತ್ವದಲ್ಲಿ ನಡೆಯುವ ಈ ಕಂಬಳವನ್ನು ಭಾನುವಾರ ಬೆಳಗ್ಗೆ 10.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ.
ತಹಸೀಲ್ದಾರ್ ಎಂ.ಟಿ. ಕುಳ್ಳೇಗೌಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎನ್.ಕೆ. ಜಗನ್ನಿವಾಸ್ ರಾವ್, ಪುತ್ತೂರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅನಂತ ಶೆಣೈ ಭಾಗವಹಿಸಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ವಹಿಸಲಿದ್ದಾರೆ. ಇಂಧನ ಸಚಿವ ಡಿ.ಕೆ ಶಿವಕುಮಾರ್, ಮೀನುಗಾರಿಕೆ ಮತ್ತು ಯುವ ಜನ ಸೇವೆ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಮೊದಲಾದವರು ಭಾಗವಹಿಸಲಿದ್ದಾರೆ. ಚಿತ್ರ ನಟ ಜೈ ಕಾರ್ತಿಕ್, ಕಿರುತೆರೆ ನಟಿ ನಯನಾ, ಸುರೇಶ್ ರೈ ಭಾಗವಹಿಸಲಿದ್ದಾರೆ ಎಂದರು.
ಸನ್ಮಾನ: ಕಂಬಳದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಯ್ಯೊಟ್ಟು ಸದಾಶಿವ ಸಾಲ್ಯಾನ್, ರಾಷ್ಟ್ರೀಯ ಈಜುಗಾರ ವೈಷ್ಣವ ಹೆಗ್ಡೆ, ಸಮಾಜ ಸೇವಕ ಯು.ಪಿ.ವರ್ಗೀಸ್‌ಗೆ ಸನ್ಮಾನ ನಡೆಯಲಿದೆ. ನಂತರ, ಕಂಬಳದ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ತಿಳಿಸಿದರು.
ಸಂಚಾಲಕ ಎನ್. ಸುಧಾಕರ ಶೆಟ್ಟಿ, ಕೋಶಾಧಿಕಾರಿ ಪ್ರಸನ್ನ ಶೆಟ್ಟಿ ಪಿ.ಎನ್., ಕಾರ್ಯದರ್ಶಿ ದಿನೇಶ್ ಪಿ.ವಿ., ನಿರಂಜನ್ ರೈ ಮಠಂತಬೆಟ್ಟು ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

