ದಕ್ಷಿಣ ಕನ್ನಡ

ಶಿರಾಡಿ ಘಾಟಿ, ಆಸ್ಪತ್ರೆ ದುರವಸ್ಥೆ ಪರಿಹರಿಸದಿದ್ದರೆ ಪೊರಕೆ ಸೇವೆ

Published On :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಅಖಿಲಭಾರತ ಕಾರ್ಮಿಕ ಸಂಘ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪೊರಕೆ ಸೇವೆ ನಡೆಸಲಾಯಿತು.
 ಪ್ರತಿಭಟನೆಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಮುಖಂಡ ಸುದತ್ತ ಜೈನ್, ಶಿರಾಡಿ ಘಾಟಿ ರಸ್ತೆ ಅವ್ಯವಸ್ಥೆ, ಸರ್ಕಾರಿ ವೆನ್‌ಲಾಕ್ ಆಸ್ಪತ್ರೆ, ಲೇಡಿಗೋಷನ್, ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆ, ಬೀಡಿ ಕಾರ್ಮಿಕರ ಡಿಸ್ಪೆನ್ಸರಿಯಲ್ಲಿ ಅವ್ಯವಸ್ಥೆಗಳು, ಬಿಸಿರೋಡಿನಲ್ಲಿ ಆಕ್ರಮ ಟೋಲ್ ಸಂಗ್ರಹ, ಗ್ಯಾಸ್ ಬೆಲೆ ಏರಿಕೆ ಶೀಘ್ರ ಪರಿಹರಿಸುವಂತೆ ಜನ ಆಗ್ರಹಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಆದ್ದರಿಂದ ಅಧಿಕಾರಿಗಳು ಇದೇ ಆಟ ಮುಂದುವರಿಸಿದಲ್ಲಿ ಪೊರಕೆ ಸೇವೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
 ಜನರು ಹಲವು ಸಮಸ್ಯೆಗಳ ಸುಳಿಯಲ್ಲಿದ್ದರೂ ಜನಪ್ರತಿನಿಧಿಗಳು ತಮ್ಮ ಪಾಡಿಗೆ ತಾವಿದ್ದಾರೆ. ಇಂಥ ಪ್ರತಿನಿಧಿಗಳನ್ನು ಹಾಗೂ ಅಧಿಕಾರಿಗಳನ್ನು ಜನ ಸುಮ್ಮನೆ ಬಿಡುವುದಿಲ್ಲ ಎಂದರು.
 ಪ್ರತಿಭಟನೆಯಲ್ಲಿ ವಿಷ್ಣುಮೂರ್ತಿ ಭಟ್, ಅಶೋಕ್ ಕೊಂಚಾಡಿ, ಹರೀಶ್ ಕುಮಾರ್ ಶೆಟ್ಟಿ, ದಿನೇಶ್ ಜೆ.ಪಿ., ಗ್ಲಾಡಿಸ್ ಲೂಯಿಸ್, ಇಸ್ಮಾಯಿಲ್ ಶಾಫಿ, ಜಯಮ್ಮ, ಕಮಲ ಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.