ಪೆನ್ಸಿಲ್ವೇನಿಯ ವಿವಿ ತಂಡ ಅಧ್ಯಯನ
ಬೆಳ್ತಂಗಡಿ: ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊ. ಫೆಮಿಡಾ ಹ್ಯಾಂಡಿ ಹಾಗೂ 16 ವಿದ್ಯಾರ್ಥಿಗಳನ್ನೊಳಗೊಂಡ ತಂಡವು ಜ.4 ಹಾಗೂ 5ರಂದು 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ವಿಶೇಷ ಅಧ್ಯಯನ ನಡೆಸಿತು.
ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣದ ಕುರಿತಂತೆ ಅಧ್ಯಯನ ನಡೆಸಲು ಆಗಮಿಸಿದ ಈ ತಂಡವು ಯೋಜನೆಯ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿತು.
ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಬದಲಿ ಇಂಧನ ಕ್ಷೇತ್ರದಲ್ಲಿ ಯೋಜನೆಯ ಅನುಭವವನ್ನು ವೀರೇಂದ್ರ ಹೆಗ್ಗಡೆಯವರು ತಂಡದೊಂದಿಗೆ ಹಂಚಿಕೊಂಡರು.
ಯೋಜನೆಯ ಕೇಂದ್ರ ಕಚೇರಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಉತ್ಪಾದನಾ ಘಟಕಗಳಿಗೆ ಈ ತಂಡ ಭೇಟಿ ನೀಡಿತು.
ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ಒಕ್ಕೂಟ ಸಭೆಗೆ ತಂಡವು ಭೇಟಿ ನೀಡಿ ಅಧ್ಯಯನ ನಡೆಸಿತು. ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾ ರಾವ್, ಪ್ರಾಂಶುಪಾಲರಾದ ಹರೀಶ್ ರಾವ್, ನಾಗರಾಜ್, ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು.
ನಿಟ್ಟೆ ಹಾಗೂ ಪೆನ್ಸಿಲ್ವೆನ್ವಿಯಾ ವಿವಿಯ ವಿದ್ಯಾರ್ಥಿ ವಿನಿಮಯ ಯೋಜನೆಯಡಿ ಭಾರತಕ್ಕೆ ಆಗಮಿಸಿದ ಈ ತಂಡವು 11 ದಿನಗಳ ಕಾಲ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ. ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

