ಪ್ರಚೋದನಕಾರಿ ಭಾಷಣ: ಭಟ್ಬಂಧನಕ್ಕೆ ಆಗ್ರಹ
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.
ಪಕ್ಷದ ನಿಯೋಗ ಬುಧವಾರ ನಗರ ಪೊಲೀಸ್ ಕಮಿಷನರ್ ಆರ್. ಹಿತೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿ, ಪ್ರಭಾಕರ್ ಭಟ್ ಅವರು ಈ ಹಿಂದೆಯೂ ಉಪ್ಪಿನಂಗಡಿಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದರು. ಆ ಸಂದರ್ಭ ಪ್ರಕರಣ ದಾಖಲಾಗಿದ್ದರೂ, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಅವರ ಭಾಷಣ ಪುನರಾವರ್ತನೆಯಾಗುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಅವರು ಒತ್ತಾಯಿಸಿದರು.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಮೊಹಮ್ಮದ್ ಮಸೂದ್ ಮಾತನಾಡಿದರು. ಕಲ್ಲಡ್ಕ ಪ್ರಭಾಕರ ಭಟ್, ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಪ್ರಚೋದನಕಾರಿ ಭಾಷಣ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಬಂಧಿಸಿ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ಜಿಲ್ಲಾ ಸಮಿತಿ ಉಸ್ತುವಾರಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮೊಹಮ್ಮದ್ ಬದ್ರುದ್ದೀನ್, ಡಿ.ಎಂ.ಅಸ್ಲಂ, ಕೃಪಾ ಅಮರ್ ಆಳ್ವ, ಜೆ. ಮೊಹಮ್ಮದ್, ಅಬೂಬಕ್ಕರ್ ಕುದ್ರೋಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

