ದಕ್ಷಿಣ ಕನ್ನಡ

ರಾಜ್ಯ ಯುವ ಸಮಾವೇಶ ಉದ್ಘಾಟನೆ

Published On :

ಕಲ್ಯಾಣಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಉಡುಪಿ ಜಿಲ್ಲಾ ಸಂಸ್ಥೆ, ಕಲ್ಯಾಣಪುರ ಸ್ಥಳೀಯ ಸಂಸ್ಥೆ ಜಂಟಿ ಆಶ್ರಯದಲ್ಲಿ 5 ದಿನಗಳ ರೋವರ್ಸ್ ಮತ್ತು ರೇಂಜರ್ಸ್ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಯುವ ಸಮ್ಮೇಳನವನ್ನು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಗೈಡ್ಸ್ ರಾಜ್ಯ ಆಯುಕ್ತೆ ಶಾಂತಾ ವಿ. ಆಚಾರ್ಯ ಉದ್ಘಾಟಿಸಿದರು.
ಕಾಲೇಜಿನ ಸಂಚಾಲಕ ರೆ.ಫಾ. ಸ್ಟ್ಯಾನಿ ಬಿ. ಲೋಬೋ ಆಶೀರ್ವಚನ ನೀಡಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಶಾಸಕ ಪ್ರಮೋದ್ ಮದ್ವರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮುಖ್ಯ ಆಯುಕ್ತ ಕೆ.ಬಿ. ರಾವ್, ಕಲ್ಯಾಣಪುರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಸಾಲ್ವದೋರ್, ಇತರ ಸ್ಕೌಟ್ಸ್ ಗೈಡ್ಸ್ ನಾಯಕರಾದ ಎಸ್.ಕೆ. ಪ್ರಭಾ, ಎಡ್ವಿನ್ ಆಳ್ವ, ಶೇಖರ್ ಪೂಜಾರಿ, ಕೊಗ್ಗ ಗಾಣಿಗ ಹಾಗೂ ಪುಷ್ಪಾ ನಾಯಕ್ ಕಾರ್ಯಕ್ರಮದಲ್ಲಿ ಇದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ನೇರಿ ಕರ್ನೇಲಿಯೋ ಸ್ವಾಗತಿಸಿದರು. ಕಾರ್ಯಕ್ರಮ ಸಂಘಟಕ ಡಾ. ಜಯರಾಮ್ ಶೆಟ್ಟಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆನಂದ ಅಡಿಗ ನಿರೂಪಿಸಿ, ವಂದಿಸಿದರು.
192 ಪ್ರತಿನಿಧಿಗಳು...: ಸಮಾವೇಶದಲ್ಲಿ ಕರ್ನಾಟಕದ 16 ಜಿಲ್ಲೆಗಳಿಂದ 192 ಪ್ರತಿನಿಧಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಗೂ ಸ್ವಯಂ ಸೇವಕರು ಹಾಜರಾಗಿದ್ದು, ಪರಿಸರ ಅಧ್ಯಯನ, ವ್ಯಕ್ತಿತ್ವ ವಿಕಸನ, ನಾಯಕತ್ವ ತರಬೇತಿ ಸಾಮಾಜಿಕ ಸಮಸ್ಯೆಗಳಾದ ಮಹಿಳಾ ದೌರ್ಜನ್ಯ, ಏಡ್ಸ್, ವೃದ್ಧಾಪ್ಯ ಸಮಸ್ಯೆ ಮುಂತಾದ ವಿಷಯಗಳ ಕುರಿತು ತರಬೇತಿ, ಚರ್ಚೆ ಹಾಗೂ ಸಮಾಲೋಚನೆ ನಡೆಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.