ದಕ್ಷಿಣ ಕನ್ನಡ

ಸ್ನಾತಕೋತ್ತರ, ಪದವಿ ಪಠ್ಯಪುಸ್ತಕ ಪರಿಷ್ಕರಣೆ: ಶಿವಶಂಕರಮೂರ್ತಿ

Published On :

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ 2014-15ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಂಚೆ ತೆರಪಿನ ಶಿಕ್ಷಣ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ 13 ವಿಷಯಗಳಲ್ಲಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕುಲಪತಿ ಪ್ರೊ.ಟಿ.ಸಿ. ಶಿವಶಂಕರಮೂರ್ತಿ ಹೇಳಿದ್ದಾರೆ.
ಶುಕ್ರವಾರ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ನಡೆದ ಶೈಕ್ಷಣಿಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪದವಿಮಟ್ಟದ ದ್ವಿತೀಯ ಮತ್ತು ತೃತೀಯ ವರ್ಷದ ಕೋರ್ಸುಗಳ ಕನ್ನಡ ಭಾಷೆ ಮತ್ತು ಐಚ್ಛಿಕ ವಿಷಯ, ಬಿಎಸ್ಸಿ(ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್), ಎಫ್.ಎನ್.ಡಿ. ಪಠ್ಯಗಳನ್ನು ಪರಿಷ್ಕರಿಸಲಾಗಿದೆ.
ಅಂಚೆ ತೆರಪಿನ ಶಿಕ್ಷಣದ ಬಿಎ, ಬಿಕಾಂ, ಬಿಬಿಎಂ ಪದವಿಗಳ ಇಂಗ್ಲಿಷ್ ಭಾಷೆ ಮತ್ತು ಬಿಎ ಐಚ್ಛಿಕ ಇಂಗ್ಲಿಷ್, ಐಚ್ಛಿಕ ರಾಜ್ಯಶಾಸ್ತ್ರ, ಪತ್ರಿಕೋದ್ಯಮ, ಅರ್ಥಶಾಸ್ತ್ರ ವಿಷಯ ಹಾಗೂ ಎಂಕಾಂ ಪಠ್ಯಕ್ರಮ ಮತ್ತು ಎಂಎ ಇಂಗ್ಲಿಷ್, ಅರ್ಥಶಾಸ್ತ್ರ ವಿಷಯವನ್ನು ಹಾಗೂ ಪದವಿಯ ಪ್ರಥಮ ಹಾಗೂ ದ್ವಿತೀಯ ವರ್ಷದ ಅರ್ಥಶಾಸ್ತ್ರ ವಿಷಯಗಳನ್ನು ಪರಿಷ್ಕರಿಸಲಾಗಿದೆ.
ಪದವಿಮಟ್ಟದ ಭರತನಾಟ್ಯಂ ಮತ್ತು ಕರ್ನಾಟಿಕ್ ಮ್ಯೂಸಿಕ್ ಐಚ್ಛಿಕ ವಿಷಯಗಳ ಪಠ್ಯಗಳನ್ನು ತಿದ್ದುಪಡಿಗೊಳಿಸಲಾಗಿದೆ.
ಸ್ನಾತಕೋತ್ತರ ಕೈಗಾರಿಕೆ ರಸಾಯನಶಾಸ್ತ್ರ ಮತ್ತು ಸಮಾಜಕಾರ್ಯ ಕೋರ್ಸಿಗೆ ಬೇಡಿಕೆ ಇರುವುದರಿಂದ ಪ್ರತ್ಯೇಕ ವಿಭಾಗ ಸ್ಥಾಪಿಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ವಿಶ್ವವಿದ್ಯಾಲಯದಲ್ಲಿ 'ಬ್ರಹ್ಮಶ್ರೀ ನಾರಾಯಣ ಗುರು' ಅಧ್ಯಯನ ಕೇಂದ್ರ ಸ್ಥಾಪಿಸುವ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಿದ್ದು, 2013ನೇ ನವೆಂಬರ್‌ನಲ್ಲಿ ರು. 1 ಕೋಟಿ ಅನುದಾನ ಮಂಜೂರು ಮಾಡಿದೆ.
ವಿಶ್ವವಿದ್ಯಾಲಯಕ್ಕೆ ನಿಗದಿಪಡಿಸಲಾದ ಯೋಜನೆ ಅನುದಾನದಿಂದ ರು. 1 ಕೋಟಿ ಭರಿಸುವಂತೆ ಆದೇಶ ನೀಡಿದೆ. 2 ತಿಂಗಳಲ್ಲಿ ಕೇಂದ್ರ ಸ್ಥಾಪನೆ ಕುರಿತು ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈಗಾಗಲೇ ವಿಶ್ವವಿದ್ಯಾಲಯದಲ್ಲಿ 68 ಬೋಧಕ ಮತ್ತು 38 ಬೋಧಕೇತರ ಸಿಬ್ಬಂದಿಗಳಿಗೆ ಭಡ್ತಿ ನೀಡಲಾಗಿದೆ.
 62 ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರಿಗೆ ಶೀಘ್ರದಲ್ಲಿ ಭಡ್ತಿ ನೀಡಲಾಗುವುದು ಎಂದು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.