ದಕ್ಷಿಣ ಕನ್ನಡ

ಸಿಂಡ್ ಬ್ಯಾಂಕ್‌ಗೆ ಕಾಣಿಯೂರು ಶ್ರೀ ಭೇಟಿ

Published On :

ಮಣಿಪಾಲ; ಜ.18ರಂದು ಪರ್ಯಾಯ ಪೀಠಾರೋಹಣ ನಡೆಸಲಿರುವ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು ಸಂಪ್ರದಾಯದಂತೆ ಮಣಿಪಾಲದಲ್ಲಿರುವ ಸಿಂಡಿಕೇಟ್ ಬ್ಯಾಂಕ್‌ನ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸುಧೀರ್ ಕುಮಾರ್ ಜೈನ್ ಶ್ರೀಗಳನ್ನು ಗೌರವಿಸಿದರು. ಇದೇ ಸಂದರ್ಭದಲ್ಲಿ ಶ್ರೀಗಳು ಬ್ಯಾಂಕಿನ ನೂತನ ವರ್ಷದ ರಜಾ ದಿನಗಳ ಕ್ಯಾಲೆಂಡರ್ ಬಿಡುಗಡೆಗೊಳಿಸಿ, ಬ್ಯಾಂಕಿನ ಅಧಿಕಾರಿ, ಸಿಬ್ಬಂದಿಯನ್ನು ಪರ್ಯಾಯೋತ್ಸವಕ್ಕೆ ಆಹ್ವಾನಿಸಿದರು. ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಂ. ಆಂಜನೇಯ ಪ್ರಸಾದ್ ಮತ್ತು ಟಿ.ಕೆ. ಶ್ರೀವಾಸ್ತವ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.



ರಸ್ತೆಗೆ ಬೈಕ್ ಮಗುಚಿ ಇಬ್ಬರಿಗೆ ಗಾಯ
ಕಾಪು; ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಇನ್ನಂಜೆಯಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಪ್ರದೀಪ್ ಹಾಗೂ ರಶ್ಮಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.