15ರಿಂದ 'ಕಾಂಗ್ರೆಸ್ ಇಳಿಸಿ, ದೇಶ ಉಳಿಸಿ' ಅಭಿಯಾನ
ಮಂಗಳೂರು: ಲೋಕಸಭಾ ಚುನಾವಣೆ ದೃಷ್ಟಿಯಲ್ಲಿರಿಸಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಜ.15ರಿಂದ 30ರ ವರೆಗೆ ಜಿಲ್ಲಾ ಮಟ್ಟದಲ್ಲಿ 'ಕಾಂಗ್ರೆಸ್ ಇಳಿಸಿ, ದೇಶ ಉಳಿಸಿ' ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್ಸಿಂಹ ನಾಯಕ್ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಮೊದಲ ಹಂತದಲ್ಲಿ 120 ದಿನಗಳ ಕಾರ್ಯಸೂಚಿ ಸಿದ್ಧಪಡಿಸಿದ್ದು, ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಸಮಿತಿ ನಿರ್ಮಿಸಿ, ಶಕ್ತಿ ಕೇಂದ್ರ ಪ್ರಮುಖರನ್ನು ಗುರುತಿಸಿ ಚುನಾವಣೆಗೆ ಕಾರ್ಯಪಡೆಯನ್ನು ಸಿದ್ಧಗೊಳಿಸುವ ಕಾರ್ಯಕ್ರಮ ಸೇರಿಸಲಾಗಿದೆ. ಮೊದಲು ಜ.12ರಿಂದ 16ರ ವರೆಗೆ ವಿಧಾನಸಭಾ ಕ್ಷೇತ್ರ ಸಮಾವೇಶ, 19ರಂದು ವಿಶೇಷ ಅಭಿಯಾನ ಅಂಗವಾಗಿ ಜಿಲ್ಲೆಯ ಎಲ್ಲ ಪ್ರಮುಖರ ಮನೆ ಭೇಟಿ ಕಾರ್ಯಕ್ರಮ. ಬಂಟ್ವಾಳ ಕ್ಷೇತ್ರದಲ್ಲಿ ಜ.14ರಿಂದ 26ರ ವರೆಗೆ ಕ್ಷೇತ್ರದ 56 ಗ್ರಾಮಗಳಲ್ಲಿ ಪಾದಯಾತ್ರೆ, ಜ.15ರಿಂದ 30ರ ವರೆಗೆ ಪಕ್ಷಕ್ಕಾಗಿ ನಿಧಿ ಸಂಗ್ರಹ ಅಭಿಯಾನ ನಡೆಯಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

