ದಕ್ಷಿಣ ಕನ್ನಡ

ಉಪ್ಪಿನಂಗಡಿ, ರಾಮಕುಂಜ, ಕೊಯ್ಲದಲ್ಲೂ ಪ್ರತಿಭಟನೆ

Published On :

ಉಪ್ಪಿನಂಗಡಿ: ಪೆಟ್ರೋಲ್, ಗ್ಯಾಸ್ ಹಾಗೂ ಇನ್ನಿತರ ಬಿಡಿಭಾಗಗಳ ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ನಾಲ್ಕು ರಿಕ್ಷಾ-ಚಾಲಕ ಮಾಲೀಕರ ಸಂಘಟನೆಗಳ ಸಹಭಾಗಿತ್ವದಲ್ಲಿ ಸೋಮವಾರ ಕರೆ ನೀಡಲಾದ ಸಂಚಾರ ಬಂದ್ ಪ್ರತಿಭಟನೆಯಲ್ಲಿ ಉಪ್ಪಿನಂಗಡಿ, ಕೊಯ್ಲ, ರಾಮಕುಂಜ ಮೊದಲಾದ ಕಡೆಗಳಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.
ಬೆಳಗ್ಗೆ 6ರಿಂದ ಸಂಜೆ 6ರ ತನಕ ಉಪ್ಪಿನಂಗಡಿ ಹಾಗೂ ಸುತ್ತಮುತ್ತಲ ಪ್ರದೇಶಗಳ ರಿಕ್ಷಾ ಚಾಲಕರು ಪ್ರಯಾಣಿಕ ಸೇವೆ ಸ್ಥಗಿತಗೊಳಿಸಿ ಪ್ರತಿಭಟಿಸಿದ್ದಾರೆ. ರಿಕ್ಷಾ ಚಾಲಕರ ಪ್ರತಿಭಟನೆಯಿಂದಾಗಿ ಪ್ರಯಾಣಿಕರು, ವಿದ್ಯಾರ್ಥಿಗಳು ತೊಂದರೆಗೊಳಗಾದರು.
ಗಡಿ ದಾಟಿದ ಆಟೋದವರಿಗೆ ತಡೆ: ಪುತ್ತೂರು ತಾಲೂಕು ಆಟೋ ರಿಕ್ಷಾ ಚಾಲಕರ ಸಂಘಟನೆಗಳು ಸೋಮವಾರ ಪ್ರತಿಭಟನೆಗೆ ತೊಡಗಿದ್ದರೆ, ನೆರೆಯ ಬೆಳ್ತಂಗಡಿ ತಾಲೂಕಿನಲ್ಲಿ ಪ್ರತಿಭಟನೆಯ ಕರೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ನೆರೆಯ ಗ್ರಾಮವಾದ ಇಳಂತಿಲದಿಂದ ರಿಕ್ಷಾ ಚಾಲಕರು ಪ್ರಯಾಣಿಕ ಸೇವೆ ನೀಡಲು ಮುಂದಾಗಿ ಇಳಂತಿಲದಿಂದ ಉಪ್ಪಿನಂಗಡಿಗೆ ಪ್ರಯಾಣಿಕರನ್ನು ಕರೆತರುವಾಗ ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ರಿಕ್ಷಾ ಚಾಲಕರನ್ನು ಕೆರಳಿಸಿತು.
ಅವರು ಒಗ್ಗೂಡಿ ಉಪ್ಪಿನಂಗಡಿಗೆ ಪ್ರವೇಶಿಸಿದ ರಿಕ್ಷಾವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಲು ಆಗ್ರಹಿಸಿದರು. ಈ ಸಂದರ್ಭ ಉಂಟಾದ ವಿವಾದ ತಾರಕಕ್ಕೇರಿ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ , ಪರಿಸ್ಥಿತಿ ನಿಯಂತ್ರಿಸಿದರು. ಬಳಿಕ ಉಪ್ಪಿನಂಗಡಿ ಪ್ರವೇಶಿಸಿದ ರಿಕ್ಷಾಗಳನ್ನು ಹಿಂದಕ್ಕೆ ಕಳುಹಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.