ಶುಲ್ಕ ವಿನಾಯಿತಿ ರದ್ದು ಸಮಸ್ಯೆ ಪರಿಹಾರ: ಸಿಎಂ ಭರವಸೆ
ಸುಳ್ಯ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಿದ್ದ ಶುಲ್ಕ ವಿನಾಯಿತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿರುವುದರಿಂದ ಬಡ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ಕಳೆದ ಶೈಕ್ಷಣಿಕ ವರ್ಷದ ರೀತಿಯಲ್ಲಿ ಮುಂದುವರಿಸಬೇಕೆಂದು ಮಂಗಳೂರಿನ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ಎಂ.ಎಸ್.ಡಬ್ಲ್ಯೂ. ವಿದ್ಯಾ ರ್ಥಿ ಇರ್ಷಾದ್ ಗೂನಡ್ಕ ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಜ.30ರೊಳಗಾಗಿ ಈ ಸಮಸ್ಯೆ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಈ ಬಗ್ಗೆ ಉನ್ನತ ಮಟ್ಟದಲ್ಲಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರದಿಂದ ಸುತ್ತೋಲೆ ಹೊರಡಿಸಬೇಕೆಂದು ಸೂಚಿಸಿದರು.
ಇದರ ಬಗ್ಗೆ ಈ ತಿಂಗಳ ಒಳಗೆ ಶುಲ್ಕ ವಿನಾಯಿತಿ ನೀಡಿ ಆದೇಶ ಹೊರಡಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಗೂನಡ್ಕ ತಿಳಿಸಿದ್ದಾರೆ. ನಿಯೋಗದಲ್ಲಿ ವಿದ್ಯಾರ್ಥಿಗಳಾದ ಅಯೂಬ್, ನೌಷಾದ್ ಗೂನಡ್ಕ ಮತ್ತು ಝಕರಿಯಾ ಜೊತೆಗೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

