ದಕ್ಷಿಣ ಕನ್ನಡ

ಅತ್ಯಾಚಾರ ಯತ್ನ ಆರೋಪಿಯ ಪೊಲೀಸರಿಗೊಪ್ಪಿಸಿದ ನಾಗರಿಕರು

Published On :

ಉಪ್ಪಿನಂಗಡಿ: ವಿವಾಹಿತೆಯ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಹರೀಶ್ ಪೂಜಾರಿ (24)ಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬುಧವಾರ ಆಲಂತಾಯ ಗ್ರಾಮದಲ್ಲಿ ನಡೆದಿದೆ.
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಆಲಂತಾಯ ಗ್ರಾಮದ ಪೆರ್ನಾರು ಎಂಬಲ್ಲಿ ಎರಡು ಮಕ್ಕಳ ತಾಯಿಯ ಮೇಳೆ ಸೋಮವಾರ ನೀರು ಕೇಳುವ ನೆಪದಲ್ಲಿ ನುಗ್ಗಿದ್ದ ಹರೀಶ್ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಪರಾರಿಯಾಗಿದ್ದ. ಮಹಿಳೆ ಪೊಲೀಸರಿಗೆ ಈ ಸಂಬಂಧ ದೂರು ನೀಡಿದ್ದರೂ ಪೊಲೀಸರು ಆರೋಪಿ ಬಂಧನಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿದ್ದ ಸ್ಥಳೀಯರೇ ಕಾರ್ಯತಂತ್ರ ರೂಪಿಸಿ ಬುಧವಾರ ಹರೀಶ್ ಪೂಜಾರಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.
ಠಾಣೆಯಲ್ಲಿ ಮಾತಿನ ಚಕಮಕಿ: ಆರೋಪಿ ಹರೀಶನನ್ನು ನೊಂದ ಮಹಿಳೆಯ ಸಂಬಂಧಿಗಳೊಂದಿಗೆ ಮಾತುಕತೆ ನಡೆಸಿ ಈ ಪ್ರಕರಣ ಇತ್ಯರ್ಥ ಪಡಿಸುವ ನಾಟಕವಾಗಿ ಸ್ಥಳೀಯರು ಆತನನ್ನು ಸ್ಥಳಕ್ಕೆ ಬರುವಂತೆ ಹೇಳಿದ್ದರು. ಅದರಂತೆ ಆರೋಪಿ ಹರೀಶ್ ಸ್ಥಳಕ್ಕೆ ಬಂದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದರು.
ಈ ಸಂದರ್ಭ ನೊಂದ ಮಹಿಳೆಯ ಸಹೋದರರು ಮತ್ತು ಸ್ಥಳೀಯರು ಆರೋಪಿಯ ಮೇಲೆ ಹಲ್ಲೆ ನಡೆಸಿದ್ದರೆನ್ನಲಾಗಿದೆ. ಸ್ಥಳೀಯರಿಂದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳೀಯರ ಕಾರ್ಯವನ್ನು ಶ್ಲಾಘಿಸುವ ಬದಲು ಆತನ ಮೇಲೆ ಹಲ್ಲೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಪರಸ್ಪರ ಮಾತಿನ ಚಕಮಕಿ ನಡೆಯಿತು. ಬಳಿಕ ಎಸ್ಐ ಶಿವಕುಮಾರ್ ಮಧ್ಯೆಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರು. ಅತ್ಯಾಚಾರದಂಥ ಕೃತ್ಯಗಳಲ್ಲಿ ಆರೋಪಿಯ ರಕ್ಷಣೆ ನಡೆಯುತ್ತದೆ ಎಂದಾದರೆ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿ.ಪಂ. ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಮತ್ತು ಸದಸ್ಯ ಕೇಶವ ಗೌಡ ಬಜತ್ತೂರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.