31ರಿಂದ ಪಾರೆಂಕಿ ದೇವಾಲಯ ಬ್ರಹ್ಮಕಲಶೋತ್ಸವ
ಬೆಳ್ತಂಗಡಿ: ಮಡಂತ್ಯಾರು ಗ್ರಾಮದ ಪಾರೆಂಕಿ ಶ್ರೀಮಹಿಷಮರ್ದಿನಿ ದೇವಾಲಯದಲ್ಲಿ ಜ.31ರಿಂದ ಫೆ.3ರವರೆಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ನೆರವೇರಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ. ಜಯಂತ ಶೆಟ್ಟಿ ತಿಳಿಸಿದ್ದಾರೆ.
ಭಾನುವಾರ ಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ಸವದ ವಿವರ ನೀಡಿದರು. ಬ್ರಹ್ಮ ಕಲಶೋತ್ಸವ ನಿಮಿತ್ತ ಗರ್ಭಗುಡಿಯ ಮಾಡಿಗೆ ತಾಮ್ರದ ಹೊದಿಕೆ, ಒಳಾಂಗಣಕ್ಕೆ ಗ್ರಾನೈಟ್, ಪ್ರಧಾನ ದ್ವಾರ ಹಾಗೂ ಗೋಪುರಗಳ ನವೀಕರಣ, ಆವರಣ ಗೋಡೆ ರಚನೆ, ಅನ್ನಛತ್ರ ಮತ್ತು ಸಭಾಭವನ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಂಡು ಕಾಮಗಾರಿಗಳು ಭರದಿಂದ ಸಾಗಿವೆ. ಇದಕ್ಕೆ ಒಟ್ಟು ರು. ಒಂದು ಕೋಟಿ ಇಪ್ಪತ್ತು ಲಕ್ಷ ಅಂದಾಜು ವೆಚ್ಚ ತಗುಲಲಿದೆ. ಫೆ.1ರಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ರಾಜೇಶ್ವರಿ ಬಿ. ಜೋಶಿ ಉದ್ಘಾಟಿಸಲಿದ್ದಾರೆ. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಫೆ.3ರಂದು ಮೀನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ಜಾತ್ರೆ ನಡೆಯಲಿದೆ ಎಂದರು.
ಶಾಸಕ ಕೆ.ವಸಂತ ಬಂಗೇರ ಅಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಗಿದೆ. ನಾಲ್ಕು ದಿನ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 80,000 ಭಕ್ತರು ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಪೂರ್ವಾಹ್ನ ನಡೆಯುವ ಧಾರ್ಮಿಕ ಸಭೆಯಲ್ಲಿ ಊರಿನವರು, ಪರಊರಿನ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಆಡಳ್ತೆ ಮೊಕ್ತೇಸರ ಬಿ.ರತ್ನಾಕರ ಶೆಟ್ಟಿ ಮೂಡಾಯೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಅಧಿಕಾರಿ, ಕಾರ್ಯದರ್ಶಿ ಕಾಂತಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ವೀರೇಂದ್ರ ಕುಮಾರ್, ಪ್ರಧಾನ ಅರ್ಚಕ ಟಿ.ವಿ.ಶ್ರೀಧರ ರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

