ಶ್ರೀಕ್ಷೇತ್ರ ನಿಟಿಲಾಪುರ ನೂತನ ಜೀರ್ಣೋದ್ಧಾರ ಸಮಿತಿ ಮುಂದುವರಿಕೆಗೆ ಆದೇಶ
ಬಂಟ್ವಾಳ: ಗೋಳ್ತಮಜಲು ಗ್ರಾಮ ಮೊಗರನಾಡು ಸಾವಿರ ಸೀಮೆ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಊರ್ಜಿತದಲ್ಲಿರುವ ನೂತನ ಜೀರ್ಣೋದ್ಧಾರ ಸಮಿತಿಯನ್ನೇ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಬರಿಮಾರ್ ತಿಳಿಸಿದ್ದಾರೆ.
ಬುಧವಾರ ಬಿ.ಸಿ. ರೋಡ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೆ ಜೀರ್ಣೋದ್ಧಾರ ಸಮಿತಿ ರಾಜ್ಯ ಹೈಕೋರ್ಟ್ನಲ್ಲಿ ನೂತನ ಜೀರ್ಣೋದ್ಧಾರ ಸಮಿತಿ ವಿರುದ್ಧ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನೂತನ ಸಮಿತಿಯನ್ನೇ ಮುಂದುವರಿಸುವಂತೆ ಜ.7ರಂದೇ ಆದೇಶ ಹೊರಡಿಸಿದೆ ಎಂದು ಸ್ಪಷ್ಟಪಡಿಸಿದರು.
ಹಳೆ ಜೀರ್ಣೋದ್ಧಾರ ಸಮಿತಿಯ ಅವಧಿಯು 2013 ಅಕ್ಟೋಬರ್ 12ರಂದು ಮುಗಿದಿದ್ದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಅಧಿನಿಯಮದ ತಿದ್ದುಪಡಿ ನಿಯಮಗಳು 2010ರ ವಿಧಿ 40 ಬಿಯಂತೆ ಮಂಗಳೂರು ಸಹಾಯಕ ಆಯುಕ್ತರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿಯವರಿಗೆ ಜ್ಞಾಪನಾ ಪತ್ರ ಕಳುಹಿಸಿದ್ದರು ಎಂದು ವಿವರಿಸಿದ ಅಶೋಕ್ ಕುಮಾರ್, ದೇವಳದ ಜೀರ್ಣೋದ್ಧಾರ ಕಾರ್ಯ ಮುಂದುವರಿಸುವ ನಿಟ್ಟಿನಲ್ಲಿ ಭಕ್ತರ ಕೋರಿಕೆಯಂತೆ ಸಚಿವ ರಮಾನಾಥರೈ ನೂತನ ಜೀರ್ಣೋದ್ಧಾರ ಸಮಿತಿ ರಚಿಸುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು ಎಂದು ತಿಳಿಸಿದರು.
ಅದರಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಇಲಾಖೆಯ ಆಯುಕ್ತರು ಸಚಿವ ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ನೂತನ ಜೀರ್ಣೋದ್ಧಾರ ಸಮಿತಿಯನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ. ಜ. 22ರಂದು ಶ್ರೀ ದೇವಳದ ಸುತ್ತು ಪೌಳಿಯಲ್ಲಿ ಶ್ರೀ ಗಣಪತಿ ದೇವರ ಗುಡಿ, ಶಾಸ್ತವು ದೇವರ ಗುಡಿ, ಕುಮಾರಿ ದೇವಿಯ ಗುಡಿ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು ಎಂದರು.
ಇದೀಗ ಹಳೆ ಜೀರ್ಣೋದ್ದಾರ ಸಮಿತಿಯು ನ್ಯಾಯಾಲಯದ ಆದೇಶವನ್ನು ತಿರುಚಿ ಭಕ್ತರಲ್ಲಿ ಗೊಂದಲ ಉಂಟು ಮಾಡುತಿದ್ದಾರೆಂದು ಆರೋಪಿಸಿದ ಅಶೋಕ್ ಕುಮಾರ್, ಹಳೆ ಸಮಿತಿಯ ಈ ಕೃತ್ಯವನ್ನು ಖಂಡಿಸಿದ್ದಾರೆ.
ಜ.22ರಂದು ಶಿಲಾನ್ಯಾಸ ಸಮಾರಂಭ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥರು, ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮನಾಭ ರೈ, ಸುರೇಶ್ ನಿಟಿಲಾಪುರ, ಬಟ್ಯಪ್ಪ ಶೆಟ್ಟಿ, ಜಗನಾಥ್ ಚೌಟ ಮಾಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

