ಇಂದು ವಿಚಾರ ಸಂಕಿರಣ
ಮಂಗಳೂರು: ಮಂಗಳೂರಿನ ಬೆಸೆಂಟ್ ಕಾಲೇಜಿನಲ್ಲಿ ಭಾರತೀಯ ಚಿಂತನೆಯಲ್ಲಿ 'ಸಾಮಾಜಿಕ ಬಂಡವಾಳ ರಚನೆ' ಕುರಿತು ಜ.17ರಂದು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಮಾಜಿ ಪ್ರಾಂಶುಪಾಲೆ ಡಾ.ಟಿ.ಮಂಜುಳಾ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಮುಂಬೈ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಪ್ರೊ.ಡಾ.ಎನ್.ಜಯರಾಮ್ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡುವರು. ಸಂಜೆ 4ಕ್ಕೆ ಸಮಾರೋಪದಲ್ಲಿ ಕರ್ಣಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ದೇಶಪಾಂಡೆ ಮಾತನಾಡುವರು ಎಂದರು.
ಇಂದು ಗ್ರಾಮಸಭೆ
ಮೂಲ್ಕಿ: ಮೆನ್ನಬೆಟ್ಟು, ಕೊಂಡೆಮೂಲ, ನಡುಗೋಡು ಮತ್ತು ಕಿಲೆಂಜೂರು ಗ್ರಾಮಗಳನ್ನೊಳಗೊಂಡ ಮೆನ್ನಬೆಟ್ಟು ಗ್ರಾಮ ಪಂಚಾಯ್ತಿಯ 2013-14ರ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಜನವರಿ 17ರ ಬೆಳಗ್ಗೆ ಮೆನ್ನಬೆಟ್ಟು ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಜರಗಲಿದೆಯೆಂದು ಪ್ರಕಟಣೆ ತಿಳಿಸಿದೆ.
ಗ್ಯಾಸ್ ವಿತರಣೆ ಕೇಂದ್ರ ಮಂಜೂರು
ಉಪ್ಪಿನಂಗಡಿ: ಕಡಬ ವ್ಯಾಪ್ತಿಗೆ ಎಲ್ಪಿಜಿ ವಿತರಣೆ ಕೇಂದ್ರ ಮಂಜೂರಾಗಿದೆ. ಇದುವರೆಗೆ ಕಡಬಕ್ಕೆ ಸುಳ್ಯ ಮತ್ತು ಪುತ್ತೂರಿನಿಂದ ಎಲ್ಪಿಜಿ ಸರಬರಾಜು ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಡಬದಲ್ಲಿಯೇ ಎಲ್ಪಿಜಿ ವಿತರಣೆ ಕೇಂದ್ರ ಆರಂಭಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಪಿ. ವರ್ಗೀಸ್ ಅವರು ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು ಕಡಬಕ್ಕೆ ಎಲ್ಪಿಜಿ ವಿತರಣೆ ಕೇಂದ್ರ ಮಂಜೂರು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

