ಇಂಗ್ಲಿಷ್ ಕಲಿಕೆಗೆ ಆಂಗ್ಲ ಮಾಧ್ಯಮ ಬೇಡ: ಕೆ.ಟಿ.ಗಟ್ಟಿ
ಮಂಗಳೂರು: ಪರಭಾಷಾ ವ್ಯಾಮೋಹಕ್ಕೆ ಸಿಲುಕಿದರೆ ಕನ್ನಡ ಭಾಷೆ ಬೆಳೆಯದು. ಇಂಗ್ಲಿಷ್ ಮಾತನಾಡಲು ಆಂಗ್ಲ ಮಾಧ್ಯಮವೇ ಬೇಕಾಗಿಲ್ಲ. ಮೂರ್ನಾಲ್ಕು ತಿಂಗಳಲ್ಲಿ ಇಂಗ್ಲಿಷ್ ಕಲಿಯಬಹುದು ಎಂದು ಕಾದಂಬರಿಕಾರ ಕೆ.ಟಿ.ಗಟ್ಟಿ ಅಭಿಪ್ರಾಯಪಟ್ಟರು. ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ 'ರತ್ನೋತ್ಸವ-2014', ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ, ಧರ್ಮ, ಸಂಸ್ಕೃತಿಗಿಂತ ಮಾನವೀಯತೆ ಸಮ್ಮೇಳನಗಳಲ್ಲಿ ಇರಬೇಕು. ನಮ್ಮಲ್ಲಿ ಪರಭಾಷಿಕರಿದ್ದರೂ ಕನ್ನಡಿಗರು ಸಜ್ಜನರು. ನಮಗೆ ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಭಿಮಾನವಿದೆ. ಬೇರೆ ಬೇರೆ ಭಾಷೆಗಳನ್ನು ಮಾತನಾಡುವ ಕನ್ನಡಿಗರೂ ನಮ್ಮಲ್ಲಿದ್ದಾರೆ. ಅದು ಅಭಿಮಾನ ಶೂನ್ಯತೆ ಅಲ್ಲ ಎಂದರು. ಐಟಿ, ಬಿಟಿಯಲ್ಲಿ ದುಡಿಯುವವರು ಕೇವಲ ದುಡ್ಡಿನ ಆಸೆ ತೋರ್ಪಡಿಸಿದರೆ, ನಮ್ಮ ಸಂಸ್ಕೃತಿ, ಶಿಕ್ಷಣದ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಸಮ್ಮೇಳನವನ್ನು ಉದ್ಘಾಟಿಸಿದರು. ಹಿರಿಯ ಕವಿ, ಸಾಹಿತಿ ಮತ್ತು ಜಾನಪದ ವಿದ್ವಾಂಸ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ಗೆ 'ವಿದ್ಯಾರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

