ಕಾಂಗ್ರೆಸ್ನಿಂದ ದೇಶ ಅಭದ್ರ: ಸತೀಶ್ ಪ್ರಭು
ಬಂಟ್ವಾಳ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ತಪ್ಪು ರಕ್ಷಣಾ ನೀತಿಯಿಂದಾಗಿ ದೇಶದಲ್ಲಿ ಆಂತರಿಕ ಅಭದ್ರತೆ ಉಂಟಾಗಿದ್ದು, ಉತ್ತರ ಭಾರತದಲ್ಲಿ ಮಾತ್ರ ಇದ್ದ ಭಯೋತ್ಪಾದಕರು ದಕ್ಷಿಣದ ಗಲ್ಲಿಗಲ್ಲಿಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಸತೀಶ್ ಪ್ರಭು ಆರೋಪಿಸಿದ್ದಾರೆ.
ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ 'ಗ್ರಾಮದೆಡೆಗೆ ಬಿಜೆಪಿ ನಡಿಗೆ' ಪಾದಯಾತ್ರೆಯ 6ನೇ ದಿನವಾದ ಭಾನುವಾರ ಸಂಜೆ ನಾವೂರು ಗ್ರಾಮದ ಕನಪಾದೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ. ಆನಂದ, ಕಾರ್ಯಕ್ರಮ ಸಂಚಾಲಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ದ.ಕ. ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಸಂಜಯ ಪ್ರಭು ಮಾತನಾಡಿದರು.
ಪಾದಯಾತ್ರೆಯ ನೇತಾರ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಮಾತನಾಡಿ, ಲೋಕಸಭೆ ಚುನಾವಣೆವರೆಗೂಪಕ್ಷದ ಸಂಘಟನಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುತ್ತೇನೆ ಎಂದರು.
ಪಕ್ಷದ ಪ್ರಮುಖರಾದ ಪುರುಷ ಸಾಲ್ಯಾನ್, ಪೃಥ್ವಿರಾಜ್, ವಿಲಾಸಿನಿ ಶಾಂತವೀರ ಪೂಜಾರಿ, ದಿನೇಶ್ ಅಮ್ಟೂರು, ಗಿರಿಜ, ರಾಮಚಂದ್ರ ಭಟ್, ಚರಣ್ ಜುಮಾದಿಗುಡ್ಡೆ, ರೊನಾಲ್ಡ್ ಡಿಸೋಜ ಅಮ್ಟಾಡಿ, ಅಬ್ದುಲ್ ರಝಾಕ್ ಇದ್ದರು. ಸದಾನಂದ ಹಳೆಗೇಟು ಸ್ವಾಗತಿಸಿ, ದೇವಪ್ಪ ಪೂಜಾರಿ ವಂದಿಸಿದರು. ರಾಮದಾಸ್ ಬಂಟ್ವಾಳ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

