ದಕ್ಷಿಣ ಕನ್ನಡ

ನಾಳ ದುರ್ಗಾಪರಮೇಶ್ವರಿ ದೇವಳ ರಾಜಗೋಪುರ ಉದ್ಘಾಟನೆ

Published On :

ಬೆಳ್ತಂಗಡಿ: ಭಗವಂತ ನಮಗೆ ಬದುಕುವ ಉತ್ತಮ ಅವಕಾಶಗಳನ್ನು ದಯಪಾಲಿಸಿದ್ದಾನೆ. ಇದನ್ನು ಸದುಪಯೋಗಿಸಿಕೊಂಡು ಭಾಗ್ಯವಂತರಾಗಿ ಬಾಳಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಭಾನುವಾರ ಗೇರುಕಟ್ಟೆ ಸನಿಹದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಸುಮಾರು ರು. 60 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ರಾಜಗೋಪುರವನ್ನು ಉದ್ಘಾಟಿಸಿ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಈ ಸಂದರ್ಭ ಜ.19 ರಿಂದ 23 ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಡಾ. ಹೆಗ್ಗಡೆಯವರನ್ನು ದೇಗುಲದ ವತಿಯಿಂದ ಅಭಿನಂದಿಸಲಾಯಿತು.
ಅಧ್ಯಕ್ಷತೆಯನ್ನು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ವಹಿಸಿದ್ದರು.
ಮಂಗಳೂರು ಮಂಗಳಾದೇವಿ ದೇವಸ್ಥಾನದ ಟ್ರಸ್ಟಿ ಪ್ರೇಮಲತಾ ಎಸ್. ಕುಮಾರ್, ಉಜಿರೆ ಸಂಧ್ಯಾ ಟ್ರೇಡರ್ಸ್‌ನ ರಾಜೇಶ್ ಪೈ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಬಲ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜನಾರ್ದನ ಪೂಜಾರಿ, ಜಿ. ವೆಂಕಟ್ರಮಣ ಪೈ, ಲಿಂಗಪ್ಪ ಗೌಡ, ಅಂಬಾ ಬಿ. ಆಳ್ವ, ವಿಜಯ ಎಚ್. ಪ್ರಸಾದ್, ಸುರೇಂದ್ರ ಕುಮಾರ್ ಜೈನ್, ಬಾಬು ಕೆ.ಎನ್. ಇದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು ಸ್ವಾಗತಿಸಿ, ಪ್ರಸ್ತಾವಿಸಿದರು. ಅಭಿವೃದ್ಧಿ ಸಮತಿ ಅಧ್ಯಕ್ಷ ಆನಂದ ಶೆಟ್ಟಿ ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವ ಎಚ್. ಕಾರ್ಯಕ್ರಮ ನಿರ್ವಹಿಸಿದರು.
ಇಂದಿನ ಕಾರ್ಯಕ್ರಮ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಎರಡನೇ ದಿನವಾದ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳು, ಸಂಜೆ 7 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ದೇವೇಂದ್ರ ಹೆಗ್ಡೆ ಕೊಕ್ರಾಡಿ ವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.