ದಕ್ಷಿಣ ಕನ್ನಡ

27ರಿಂದ ತರಗತಿ ಬಹಿಷ್ಕಾರ ಪ್ರತಿಭಟನೆ: ಅತಿಥಿ ಉಪನ್ಯಾಸಕರ ಎಚ್ಚರಿಕೆ

Published On :

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 8 ವರ್ಷಗಳಿಂದ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಪ್ರತಿಭಟನೆ ಹೋರಾಟ ನಡೆಸುತ್ತಿದ್ದಾರೆ. ಅದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಜ.5ರಂದು ಮಂಗಳೂರಿನಲ್ಲಿ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದಿದ್ದೇವೆ. ಬೇಡಿಕೆಗೆ ಸ್ಪಂದಿಸುವುದಾಗಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಲೋಬೋ ಭರವಸೆ ನೀಡಿದ್ದಾರೆ. ಜ.20ರಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಲಿದ್ದು ನಮ್ಮ ಬೇಡಿಕೆ ಈಡೇರದೇ ಇದ್ದಲ್ಲಿ ಜ.27ರಿಂದ ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಮಾಧವ ಕೆ.ಬಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 32 ಸರ್ಕಾರಿ ಕಾಲೇಜುಗಳಲ್ಲಿ 1062 ಮಂದಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ವಾರದಲ್ಲಿ 6 ದಿನ ಇದ್ದ ಕೆಲಸವನ್ನು ಇದೀಗ ವಾರಕ್ಕೆ 3 ದಿನವನ್ನಾಗಿ ಕಡಿತಗೊಳಿಸಲಾಗಿದೆ.
ಉಳಿದ ಮೂರು ದಿನ ನಾವು ಏನು ಕೆಲಸ ಮಾಡಬೇಕು. ಶಿಕ್ಷಕರಾಗಿ ಕೆಲಸ ಮಾಡಿದ ನಮಗೆ ಬೇರೆ ಯವ ಕೆಲಸವನ್ನು ಮಾಡಲು ಆಗುತ್ತಿಲ್ಲ. ಸಂಬಳ ಕಡಿತಗೊಳಿಸಲಾಗಿದೆ.
ಬೇಡಿಕೆಗಳು: ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ತಿಳಿಸಿದ್ದೇವೆ. ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಥಮ ಆದ್ಯತೆ ನೀಡಬೇಕು. ಸೇವಾ ಅನುಭವದ ಮೇಲೆ ವರ್ಷಕ್ಕೆ 5ರಂತೆ ಕೃಪಾಂಕ ನೀಡಬೇಕು.
  ಯುಜಿಸಿ ನಿಯಮದ ಪ್ರಕಾರ ತಿಂಗಳಿಗೆ ರು. 25 ಸಾವಿರ ವೇತನ ನೀಡಬೇಕು. ಕೇರಳ, ಹರಿಯಾಣ ಮಾದರಿಯಲ್ಲಿ ಸೇವಾ ಭದ್ರತೆ ನೀಡಬೇಕು. ವರ್ಷದಲ್ಲಿ 12 ತಿಂಗಳು ವೇತನ ನೀಡಬೇಕು. ಆನ್‌ಲೈನ್ ಮೂಲಕ ಮೆರಿಟ್ ಆಧಾರದಲ್ಲಿ ಆಯ್ಕೆಯದ ಶಿಕ್ಷಕರಿಗೆ ಮರು ಸಂದರ್ಶನ ಮಾಡಬಾರದು ಎಂಬ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದರು.
ನಾವು ತರಗತಿ ಬಹಿಷ್ಕಾರ ಮಾಡಿದ್ದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದರೆ ಈ ಕುರಿತು ವಿದ್ಯಾರ್ಥಿ ಸಂಘಟನೆಗಳು ಮೌನವಾಗಿರುವುದು ನಮಗೆ ತುಂಬಾ ಬೇಸರ ತಂದಿದೆ. ನಮ್ಮ ಬೇಡಿಕೆಯನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಎಂ, ಗೌರವಾಧ್ಯಕ್ಷ ಚಂದ್ರಶೇಖರ ಎಂ, ಕಾರ್ಯದರ್ಶಿ ಲೋಕೇಶ್ ಸೇಡಿಯಾಪು, ಸದಸ್ಯ ವಸಂತಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.