ಕಾರ್ಮಿಕಗೆ ನೋಟಿಸ್; ಇಎಸ್ಐ ಅಧಿಕಾರಿ ವಜಾಕ್ಕೆ ಸಂಘಟನೆ ಆಗ್ರಹ
ಮಂಗಳೂರು: ಕಾರ್ಮಿಕರ ಪರವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಕಾರ್ಮಿಕ ಮುಖಂಡ ಸುದತ್ ಜೈನ್ಗೆ ಇಎಸ್ಐಸಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಹೊಟೇಲ್ ಮಾಲಕರು ನೋಟಿಸ್ ಜಾರಿ ಮಾಡಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಅಧಿಕಾರಿಯನ್ನು ವಜಾಗೊಳಿಸುವಂತೆ ಅಖಿಲ ಭಾರತ ಕಾರ್ಮಿಕ ಸಂಘ ಜಿಲ್ಲಾ ಘಟಕ ಆಗ್ರಹಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಕ್ತಾರ ಹರೀಶ್ ಕುಮಾರ್ ಶೆಟ್ಟಿ, ಕದ್ರಿ ಶಿವಭಾಹಗ್ ಇಎಸ್ಐ ಆಸ್ಪತ್ರೆ ಎದುರು ವಿವಿಧ ಸವಲತ್ತಿಗೆ ಆಗ್ರಹಿಸಿ ಸುದತ್ ಜೈನ್ 2013 ಮೇ ತಿಂಗಳಲ್ಲಿ 11 ದಿನ ಉಪವಾಸ ಸತ್ಯಾಗ್ರಹ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಶಾಸಕ ಜೆ.ಆರ್.ಲೋಬೋ ಸರ್ಕಾರದ ಜತೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದರು. ಸಪ್ಟೆಂಬರ್ನಲ್ಲಿ ಮತ್ತೆ 13 ದಿನ ನಿರಂತರ ಉಪವಾಸ ಸತ್ಯಾಗ್ರಹ ಮಾಡಿದ್ದರು ಸುದತ್. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸಿ ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಸೆ.26ರಂದು ಇಎಸ್ಐಸಿ ಕಚೇರಿಯಿಂದ ಸುದತ್ ಜೈನ್ ಕೆಲಸ ಮಾಡುತ್ತಿರುವ ಹೊಟೇಲ್ ಮಾಲಕರಿಗೆ ನೋಟಿಸ್ ಕಳುಹಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅಧಿಕಾರಿಗಳ ಒತ್ತಡಕ್ಕೆ ಮಣಿದ ಹೊಟೇಲ್ ಮಾಲಕರು ಸುದತ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದ್ದರಿಂದ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಮುಖಂಡರಾದ ಜೀವನ್ ಲೋಬೋ, ನವೀನ್ಚಂದ್ರ, ಜಗದೀಶ್, ಗ್ಲಾಡ್ವಿನ್ ಲೂವಿಸ್ ಇದ್ದರು.
ಫೆ.7ರಂದು ಸತ್ಯಾಗ್ರಹ: ಸುದತ್ತ
ಇಎಸ್ಐ ಅಧಿಕಾರಿಯ ಒತ್ತಡದಿಂದ ಹೊಟೇಲ್ ಮಾಲಕರು ನೋಟಿಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಫೆ.7ರಂದು ಬೆಳಗ್ಗೆ 10ಕ್ಕೆ ಪ್ರತಿಭಟನೆ ನಡೆಸುವುದಾಗಿ ಕಾರ್ಮಿಕ ಮುಖಂಡ ಸುಗದತ್ ಜೈನ್ ತಿಳಿಸಿದ್ದಾರೆ. ಕದ್ರಿ ಇಎಸ್ಐ ಆಸ್ಪತ್ರೆಯಿಂದ ಮೆರವಣಿಗೆಯಲ್ಲಿ ಪೊರಕೆ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಅಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

