ದಕ್ಷಿಣ ಕನ್ನಡ

ಮೋದಿ ಪ್ರಧಾನಿಯಾಗಬೇಕು: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Published On :

ಬಂಟ್ವಾಳ: ಭಾರತ ಗೆಲ್ಲಬೇಕೆಂಬ ದೃಢ ನಿರ್ಧಾರದ ಜೊತೆಗೆ ಕಾಂಗ್ರೆಸ್ ಮುಕ್ತ ದೇಶ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಮುಖಂಡ ರಾಜೇಶ್ ನಾಯಕ್ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ನಡಿಗೆ ಪಾದಯಾತ್ರೆ 8ನೇ ದಿನವಾದ ಮಂಗಳವಾರ ಸಂಜೆ ಇರ್ವತ್ತೂರು ಗ್ರಾಮದ ಎಡ್ತೂರುಪದವು ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕರ್ತರನ್ನು ಭೇಟಿ ಮಾಡುವ ಮೂಲಕ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಇಡೀ ರಾಜ್ಯಕ್ಕೇ ಮಾದರಿಯಾಗಿದೆ ಎಂದು ಕಾರ್ಣಿಕ್ ಶ್ಲಾಘಿಸಿದರು. ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ. ಆನಂದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮ ಸಂಚಾಲಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಳಿಪಾಡಿಗುತ್ತು ರಾಜೇಶ್ ನಾಯಕ್, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಪುರುಷ ಎನ್. ಸಾಲ್ಯಾನ್ ನೆತ್ರಕೆರೆ ಮಾತನಾಡಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ಪಕ್ಷದ ಪ್ರಮುಖರಾದ ದಿನೇಶ್ ಭಂಡಾರಿ, ರಾಮದಾಸ್ ಬಂಟ್ವಾಳ, ಪೃಥ್ವಿರಾಜ್, ರೊನಾಲ್ಡ್ ಡಿಸೋಜ ಅಮ್ಟಾಡಿ, ಅಬ್ದುಲ್ ರಜಾಕ್, ಆನಂದ ಕುಲಾಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.