ಮೋಹನದಾಸ ಶೆಣೈಗೆ ಭೋಜಪ್ಪ ಸುವರ್ಣ ಪ್ರಶಸ್ತಿ
ಉಡುಪಿ: ಉಡುಪಿ- ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರ ವತಿಯಿಂದ ನೀಡಲಾಗುವ ಸಂಘ ಸ್ಥಾಪಕ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿಗೆ ಬಡಗುತಿಟ್ಟಿನ ಪ್ರಸಿದ್ಧ ಎರಡನೇ ವೇಷಧಾರಿ ಆರ್ಗೋಡು ಮೋಹನದಾಸ ಶೆಣೈ ಆಯ್ಕೆಯಾಗಿದ್ದಾರೆ. ಭಾಗವತ ಆರ್ಗೋಡು ಗೋವಿಂದರಾಯ ಶೈಣೈ ಮತ್ತು ಮಹಾಬಲ ದೇವಾಡಿಗರಲ್ಲಿ ಯಕ್ಷಗಾನ ಅಭ್ಯಾಸ ಮಾಡಿರುವ ಮೋಹನದಾಸ ಶೆಣೈ ಹಿರಿಯಡಕ, ಸಾಲಿಗ್ರಾಮ, ಮೂಲ್ಕಿ, ಪೆರ್ಡೂರು, ಶಿರ್ಸಿ, ಮಂದಾರ್ತಿ, ಕಮಲಶಿಲೆ ಮೇಳಗಳಲ್ಲಿ ದುಡಿದಿದ್ದು, ಪ್ರಸ್ತುತ ಅಮೃತೇಶ್ವರೀ ಮೇಳದಲ್ಲಿ ಎರಡನೇ ವೇಷಧಾರಿಯಾಗಿ ಕಲಾಸೇವೆ ಮಾಡುತ್ತಿದ್ದಾರೆ. ಪ್ರಶಸ್ತಿಯನ್ನು ಫೆಬ್ರವರಿಯಲ್ಲಿ ಜರುಗಲಿರುವ ಕಲಾಕ್ಷೇತ್ರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕಾರ್ಯದರ್ಶಿ ಬೆಲ್ಪತ್ರೆ ಕೇಶವ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

