ದಕ್ಷಿಣ ಕನ್ನಡ

ನಂದಳಿಕೆ: 24, 25ರಂದು ಮುದ್ದಣ 144ನೇ ಸಂಸ್ಮರಣೆ

Published On :

ಬೆಳ್ಮಣ್ಣು: ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ ನಂದಳಿಕೆ ಹಾಗೂ ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಂದಳಿಕೆ ಇದರ ಆಶ್ರಯದಲ್ಲಿ ವರಕವಿ ಮುದ್ದಣನ 144ನೇ ಸಂಸ್ಮರಣೆ ಹಾಗೂ ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ ಮತ್ತು ಕಿಣ್ಣಣ್ಣ- ಮುಣ್ಣಣ್ಣ ಪ್ರಶಸ್ತಿ ಪ್ರದಾನ ಸಮಾರಂಭ ಜ.24ರಂದು ನಡೆಯಲಿದೆ ಎಂದು ಎನ್. ಸುಹಾಸ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಸಿದರು.
ಅಂದು ಮಧ್ಯಾಹ್ನ 3 ಗಂಟೆಯಿಂದ ನಾಡಿನ ಗಣ್ಯ ವ್ಯಕ್ತಿಗಳಿಂದ ಮುದ್ದಣನ ಶ್ರೇಷ್ಠ ಕೃತಿಗಳಾದ ರತ್ನಾವತಿ ಕಲ್ಯಾಣ ಹಾಗೂ ಕುಮಾರ ವಿಜಯದ ಆಯ್ದ ಹಾಡುಗಳ ಗಾನ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಕುದಿ. ವಸಂತ್ ಶೆಟ್ಟಿ, ಕಾಂತಾವರ ಸರೋಜಿನಿ, ಲಕ್ಷ್ಮೀಕಾಂತ್ ಭಟ್, ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿ.ಕೆ. ರಾವ್ ನಂದಳಿಕೆ, ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯ, ಲಯನ್ಸ್‌ನ ಜಿಲ್ಲಾ ಗವರ್ನರ್ ಎಚ್.ಎಂ. ಶಿವಕುಮಾರ್ ಇವರನ್ನು ಸನ್ಮಾನಿಸಲಾಗುವುದು.
ಜ.25ರಂದು ಸಂಜೆ 6ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ  ಶಾಸಕ ವಿ. ಸುನಿಲ್ ಕುಮಾರ್ ವಹಿಸಲಿದ್ದಾರೆ. ಅಕ್ಷರ ದಾಸೋಹ ಕಟ್ಟಡವನ್ನು ಜಿಲ್ಲಾ ಉಸ್ತುವರಿ ಸಚಿವ ವಿನಯ್‌ಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ  ಕವಿ ಮುದ್ದಣರ ಮೊಮ್ಮಗ ನಂದಳಿಕೆ ಸೀತಾರಾಮ್ ರಾವ್ ಬೆಂಗಳೂರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಪಂ ಸದಸ್ಯ ಸುಪ್ರೀತ್ ಶೆಟ್ಟಿ ಕೆದಿಂಜೆ, ತಾಪಂ ಸದಸ್ಯ ಕ್ಸೇವಿಯರ್ ಡಿಮೆಲ್ಲೋ, ಬೆಳ್ಮಣ್ ಗ್ರಾಪಂ ಅಧ್ಯಕ್ಷ ಶಂಕರ್ ಕುಂದರ್ ಸೂಡ, ಕ್ಷೇತ್ರ ಶಿಕ್ಷಣಾಧಿಕಾರಿ ಮನಮೋಹನ್ ಎಚ್.ಕೆ, ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆ, ಶಾಲಾ ಸಂಚಾಲಕಿ ರಾಜೇಶ್ವರಿ ವಿ. ರಾವ್, ಮುದ್ದಣ ಪ್ರಕಾಶನ ಮಂಗಳೂರಿನ ನಂದಳಿಕೆ ಬಾಲಚಂದ್ರ ರಾವ್ ಭಾಗವಹಿಸಾಲಿದ್ದಾರೆ.
ಇದೇ ಸಂದರ್ಭದಲ್ಲಿ ನಂದಳಿಕೆ ಊರಿನ ಶ್ರೇಷ್ಠ ಸಾಧಕರಾದ ವೈದ್ಯಕೀಯ ಕ್ಷೇತ್ರದ ಡಾ. ಸ್ವಾತಿ ಅನಿತ್‌ರಾಜ್ ಅವರಿಗೆ ಕಿಣ್ಣಣ್ಣ-ಮುಣ್ಣಣ್ಣ ಪ್ರಶಸ್ತಿ ನೀಡಿ ಗೌರವಿಸಲಾಗುವು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಿಗೆ ಮುದ್ದಣ ಪ್ರಶಸ್ತಿ ನೀಡಲಾಗುವುದು ಎಂದು ನಂದಳಿಕೆ ಬಾಲಚಂದ್ರ ರಾವ್ ತಿಳಿಸಿದರು.
ಮನೋರಂಜನ ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಭಕ್ತ ಸಿರಿಯಾಳ ಕನ್ನಡ ಪೌರಾಣಿಕ ನಾಟಕ ಹಾಗೂ ಕವಿ ಮುದ್ದಣ ಕಲಾಕುಸುಮ ರತ್ನಾವತಿ ಕಲ್ಯಾಣ ಯಕ್ಷಗಾನ ಮತ್ತು ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿಯ ಸದಸ್ಯರಿಂದ ವಠಾರ ತುಳು ಸಾಮಾಜಿನ ನಾಟಕ ಪ್ರದರ್ಶನವಾಗಲಿದೆ ಎಂದು ಸುಹಾಸ್ ಹೆಗ್ಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಂದಳಿಕೆ ಬಾಲಚಂದ್ರ ರಾವ್, ವಿ.ಕೆ. ರಾವ್ ನಂದಳಿಕೆ, ಮುದ್ದಣ ಸ್ಮಾರಕ ಮಿತ್ರ ಮಂಡಳಿಯ ಅಧ್ಯಕ್ಷ ರವಿರಾಜ್ ಭಟ್ ನಂದಳಿಕೆ, ದೇವಾಲಯದ ಪ್ರಧಾನ ಅರ್ಚಕರಾದ ಹರೀಶ್ ತಂತ್ರಿ, ವಿನಾಯಕ್ ಕಾಮತ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.