ದಕ್ಷಿಣ ಕನ್ನಡ

ರಾಜ್ಯವ್ಯಾಪಿ ನಿರ್ಮಲ ಸಮಾಜ ಸ್ವಚ್ಛತಾ ಅಭಿಯಾನಕ್ಕೆ 26ರಂದು ಚಾಲನೆ

Published On :

ಬೆಳ್ತಂಗಡಿ: ನಾಡಿನ ಭವಿಷ್ಯದ ದೃಷ್ಟಿಯಿಂದ ಮತ್ತು ನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರವಾಸಿಗರಿಗೆ ತೋರಿಸಲು ಸೂಕ್ತ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯವ್ಯಾಪಿ ನಿರ್ಮಲ ಸಮಾಜ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜ.26 ರಂದು ಚಾಲನೆ ನೀಡಲಾಗುವುದು.
 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್ ಗುರುವಾರ ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ವಿವರ ನೀಡಿ, ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಡಾ. ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು ರಾಜ್ಯ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಎನ್. ಮಂಜುಳಾ 'ಘನತ್ಯಾಜ್ಯ ವಿಲೇವಾರಿಯಲ್ಲಿ ಸಾರ್ವಜನಿಕ ಹಾಗೂ ಸಂಘ ಸಂಸ್ಥೆಗಳ ಪಾತ್ರ ಮತ್ತು ಪ್ರಾಮುಖ್ಯತೆ' ಬಗ್ಗೆ ಆಶಯ ಭಾಷಣ ಮಾಡಲಿದ್ದಾರೆ ಎಂದರು.
ನೇತ್ರಾವತಿ ತಟ ಸ್ವಚ್ಛತೆ: ಬೆಳ್ತಂಗಡಿಯ ಪೊಲೀಸ್ ಮೈದಾನದಲ್ಲಿ ಸುಮಾರು 10,000ಕ್ಕೂ ಹೆಚ್ಚು ಮಂದಿ ಭಾನುವಾರ ಬೆಳಗ್ಗೆ 10 ಗಂಟೆಗೆ ಏಕತ್ರ ಸೇರಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಸುಮಾರು 15000 ವಾಹನಗಳಲ್ಲಿ ಜಾಥಾ ನಡೆಸಿ ನೇತ್ರಾವತಿ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಧರ್ಮಸ್ಥಳದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ವರ್ಷ ಕಾಲ ಈ ಚಳವಳಿ ನಿರಂತರವಾಗಿ ನಡೆಯಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.