ದಕ್ಷಿಣ ಕನ್ನಡ

ಚಿನ್ನ ಕಳ್ಳಸಾಗಾಟ: ಓರ್ವ ಬಂಧನ

Published On :

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಚಿನ್ನ ಕಳ್ಳ ಸಾಗಾಟ ನಡೆಸುತ್ತಿದ್ದ ಪ್ರಯಾಣಿಕನನ್ನು ಬಜಪೆ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಾಸರಗೋಡು ವಿದ್ಯಾನಗರ ಬೆದಿರಾ ಮನೆ ನಿವಾಸಿ ಮೊಹಮ್ಮದ್ ಹನೀಫ್ ಬೆದಿರ ಸುಲೈಮಾನ್ ಬಂಧಿತ. ಬುಧವಾರ ಸಂಜೆ ವಿಮಾನ ಮೂಲಕ 195.62 ಗ್ರಾಂ 11 ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಬೆಳಕಿಗೆ ಬಂದಿದೆ.
ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿ ತಾತ್ಕಾಲಿಕ ಉದ್ಘೋಷಕರಾಗಿ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪದವಿ ಪಡೆದಿದ್ದು, 50 ವರ್ಷ ಮೀರಿರಬಾರದು. ಕನ್ನಡದಿಂದ ಇಂಗ್ಲಿಷ್‌ಗೆ, ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವ ಸಾಮರ್ಥ್ಯ ಹೊಂದಿರಬೇಕು. ಪ್ರಕಟಣೆಗಳನ್ನು ಕನ್ನಡದಲ್ಲಿ ಬರೆದು ಸ್ಪಷ್ಟವಾಗಿ, ಶುದ್ಧವಾಗಿ ಉಚ್ಛರಿಸುವ ಸಾಮರ್ಥ್ಯ ಹೊಂದಿರಬೇಕು. ಮೊದಲ ಹಂತದ ಪರೀಕ್ಷಾ ಶುಲ್ಕ ರು. 300 ಮೊತ್ತವನ್ನು ಮನಿ ಆರ್ಡರ್ ಮೂಲಕ ಉಪನಿರ್ದೇಶಕರು, ಆಕಾಶವಾಣಿ ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಫೆ. 14 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಆಕಾಶವಾಣಿ ಕೇಂದ್ರ ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ನಿರ್ವಾಹಕ ಸದಾನಂದ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.