ಸರಳ ಭಕ್ತಿಯ ಶ್ರೇಷ್ಠ ಸಂತ ಕನಕದಾಸರು: ಬಂಜೆಗೆರೆ
ಕೋಟ: ಆಡಂಬರದ ಪೂಜೆ ಬದಲಾಗಿ ಕೀರ್ತನೆ ಮೂಲಕ ದೇವರ ಮನೆಯಂಗಳಕ್ಕೆ ತಂದಿಡುವ ಸರಳ ಭಕ್ತಿಯ ಶ್ರೇಷ್ಠ ಸಂತ ಕನಕದಾಸ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಬಂಜೆಗೆರೆ ಜಯಪ್ರಕಾಶ್ ತಿಳಿಸಿದರು.
ಅವರು ಇಲ್ಲಿನ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ 'ಮುತ್ತು ಬಂದಿದೆ ಕೇರಿಗೆ' ಎಂಬ ಕನಕದಾಸರ ಕುರಿತಾದ ಒಂದು ದಿನದ ಉಪನ್ಯಾಸ- ವಾಚನ- ಗಾಯನ ರಸಗ್ರಹಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕನಕದಾಸರ ವ್ಯಕ್ತಿತ್ವ - ಆದರ್ಶಗಳನ್ನು ಯುವಜನತೆ ಬಹಳ ಗಂಭೀರವಾಗಿ ಪರಿಗಣಿಸಿ ಸಾಮಾಜಿಕ ಪರಿವರ್ತನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬೆಂಗಳೂರಿನ ಕನಕದಾಸ ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ. ತ. ಚಿಕ್ಕಣ್ಣ, ಕನಕದಾಸರನ್ನು ಕೇವಲ ಭಕ್ತನನ್ನಾಗಿ ಬಿಂಬಿಸುವ ಬದಲು ಮಾನವೀಯ ಸಮಾನತೆ ಸಂದೇಶ ಸಾರಿದ ಸಮಾಜ ಸುಧಾರಕನನ್ನಾಗಿ ನೋಡಬೇಕು ಎಂದು ಅಭಿಪ್ರಾಯಪಟ್ಟರು.
ಸ್ಥಳೀಯ ಜನಪ್ರತಿನಿಧಿ ಸಂಪಾದಕ ಸುಬ್ರಹ್ಮಣ್ಯ ಪಡುಕೋಣೆ, ಕಾಲೇಜು ಅಭಿವೃದ್ಧಿ ಸದಸ್ಯ ರಮೇಶ್ ಎಚ್. ಕುಂದರ್ ಇದ್ದರು. ಕಾಲೇಜಿನ ಪ್ರಾಂಶುಪಾಲ ಕೆಂಜೂರು ವಸಂತರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಗಣೇಶ್ ಗಂಗೊಳ್ಳಿ ಮತ್ತು ತಂಡದವರಿಂದ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಿತು. ಮಂಜುನಾಥ ಆಚಾರಿ ಎಳ್ಳಂಪಳ್ಳಿ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಜೇಂದ್ರ ಎಸ್. ನಾಯಕ್ ಸ್ವಾಗತಿಸಿ, ಪ್ರಶಾಂತ್ ನೀಲಾವರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

