ದಕ್ಷಿಣ ಕನ್ನಡ

ಉಜಿರೆ: ನೈತಿಕ ಪೊಲೀಸ್ ಅಟ್ಟಹಾಸ, ನಿಶ್ಚಿತಾರ್ಥ ನಡೆದ ಜೋಡಿಗೆ ಹಲ್ಲೆ

Published On :

ಬೆಳ್ತಂಗಡಿ: ವಿವಾಹ ನಿಶ್ಚಿತಾರ್ಥವಾದ ಕಾಲೇಜ್ ವಿದ್ಯಾರ್ಥಿನಿ ಭಾವಿ ಪತಿಯೊಂದಿಗೆ ಉಜಿರೆ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಬುಧವಾರ ನಡೆದಿದೆ.
ಕಾರ್ಕಳ ಮೂಲದ ಮೂಡುಬಿದಿರೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ, ವಿವಾಹ ನಿಶ್ಚಿತಾರ್ಥವಾದ ಮೂಡಿಗೆರೆ ಮೂಲದ ಯುವಕನೊಂದಿಗೆ ಉಜಿರೆ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಏಕಾಏಕಿಯಾಗಿ ಗುಂಪೊಂದು ಹಲ್ಲೆ ನಡೆಸಿದೆ.
ಹಿಂದೂ ಹುಡುಗಿಯನ್ನು ಅಪಹರಿಸುತ್ತಿದ್ದೀಯಾ ಎಂದು ಹೇಳಿ ಹಲ್ಲೆ ನಡೆಸಿದರು. ನಾನು ಮುಸ್ಲಿಂ ಯುವತಿ ಎಂದು ಹೇಳಿ ತನ್ನ ಕಾಲೇಜು ಗುರುತಿನ ಚೀಟಿ ತೋರಿಸಿದರೂ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ಹಲ್ಲೆಗೊಳಗಾದವರು ದೂರು ನೀಡಿದ್ದಾರೆ.
ಈ ಘಟನೆ ನಡೆಯುತ್ತಿದ್ದಂತೆಯೇ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರ ತಂಡ ತಕ್ಷಣ ಸ್ಥಳಕ್ಕಾಗಮಿಸಿ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಮೇಲೆ ನಡೆದ ಹಲ್ಲೆಯ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿ ಉಜಿರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಯಿತು.
ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ರಶ್ಮಿ ಪರಡ್ಡಿ, ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಲಿಂಗಪ್ಪ ಪೂಜಾರಿ, ಎಸ್.ಐ. ಪ್ರಕಾಶ್ ದೇವಾಡಿಗ ಮೊಕ್ಕಾಂ ಹೂಡಿ ಪರಿಸ್ಥಿತಿ ನಿಭಾಯಿಸಿದರು.  ಈಗಾಗಲೇ ಪೊಲೀಸರಿಗೆ ಘಟನೆಯ ವೀಡಿಯೋ ತುಣುಕುಗಳು ದೊರೆತಿದ್ದು ಆರೋಪಿಗಳ ಬಂಧನಕ್ಕೆ ವ್ಯಾಪಕ ಬಲೆ ಬೀಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.