ದಕ್ಷಿಣ ಕನ್ನಡ

ಕೊಕ್ಕಡ: ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಘಾಟನೆ

Published On :

ಉಪ್ಪಿನಂಗಡಿ: ಗ್ರಾಮೀಣ ಪ್ರದೇಶವಾದ ಕೊಕ್ಕಡದಂಥ ಪ್ರದೇಶದಲ್ಲಿ ಶಾಖೆ ಪ್ರಾರಂಭವಾದ ಮೊದಲ ದಿನವೇ 12 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹವಾಗಿರುವುದು ಬ್ಯಾಂಕಿನ ಮೇಲೆ ಕೊಕ್ಕಡದ ಜನತೆ ಇರಿಸಿದ ನಂಬಿಕೆಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ 78ನೇ ಕೊಕ್ಕಡ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ತಮ್ಮ ಬ್ಯಾಂಕ್ ಗ್ರಾಹಕರ ಅಗತ್ಯತೆಗಳನ್ನು ಕ್ಲಪ್ತ ಸಮಯದಲ್ಲಿ ಪೂರೈಸುವ ಮೂಲಕ ಹಾಗೂ ಗ್ರಾಹಕರಲ್ಲಿ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಗ್ರಾಹಕರನ್ನು ಪಡೆದುಕೊಂಡು ಗ್ರಾಮೀಣ ಭಾಗದ ಜನರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ನೂತನ ಶಾಖೆ ಉದ್ಘಾಟಿಸಿದ ಶಾಸಕ ವಸಂತ ಬಂಗೇರ ಮಾತನಾಡಿ, ಕೊಕ್ಕಡದಂತ ಗ್ರಾಮೀಣ ಪರಿಸರದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಆರಂಭಗೊಂಡಿರುವುದು ಗ್ರಾಮೀಣ ಭಾಗದ ಜನರ ಬ್ಯಾಂಕಿಂಗ್ ಅವಶ್ಯಕತೆಗಳನ್ನು ಪೂರೈಸುವಲ್ಲಿ ಸಹಕಾರಿಯಾಗಲಿದೆ ಎಂದರು.
ಭದ್ರತಾ ಕೊಠಡಿಯನ್ನು ನಬಾರ್ಡ್‌ನ ಡಿಡಿಎಂ ಪ್ರಸಾದ್ ರಾವ್ ಉದ್ಘಾಟಿಸಿದರು. ಗಣಕೀಕರಣ ವಿಭಾಗವನ್ನು ಕೊಕ್ಕಡ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಪಿ. ವಿಶ್ವನಾಥ ಶೆಟ್ಟಿ ಉದ್ಘಾಟಿಸಿದರು.
ಹತ್ಯಡ್ಕ ಸೇ.ಸ. ಸಂಘದ ಅಧ್ಯಕ್ಷ ಎ. ಜಗನ್ನಾಥ ಗೌಡ, ಕೊಕ್ಕಡ ಸೇ.ಸ. ಸಂಘದ ಮಾಜಿ ಅಧ್ಯಕ್ಷ ಎ. ವಾಸುದೇವ ಶಬರಾಯ, ಕೊಕ್ಕಡದ ಅಪೇಕ್ಷಾ ವಾಣಿಜ್ಯ ಸಂಕೀರ್ಣದ ಮಾಲೀಕ ಹರೀಶ್ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಬಿ. ನಿರಂಜನ್, ಕೆ.ಎಸ್. ದೇವರಾಜ್, ಶಶಿಕುಮಾರ್ ರೈ ಮೊದಲಾದವರು ಇದ್ದರು.


ತಮ್ಮ ಬ್ಯಾಂಕ್ ಗ್ರಾಹಕರ ಅಗತ್ಯತೆಗಳನ್ನು ಕ್ಲಪ್ತ ಸಮಯದಲ್ಲಿ ಪೂರೈಸುವ ಮೂಲಕ ಹಾಗೂ ಗ್ರಾಹಕರಲ್ಲಿ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಗ್ರಾಹಕರನ್ನು ಪಡೆದುಕೊಂಡು ಗ್ರಾಮೀಣ ಭಾಗದ ಜನರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
 ಡಾ.ಎಂ.ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.