ಮಂಗಳೂರು ರೈಲು ನಿಲ್ದಾಣ ವಿಶ್ವದರ್ಜೆಗೆ ಶೀಘ್ರ ಜಾಗ
ಮಂಗಳೂರು: ಮಂಗಳೂರು ಕೇಂದ್ರ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸಲು ಸೂಕ್ತ ಸ್ಥಳ ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹೇಳಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವಿಶ್ವದರ್ಜೆ ನಿಲ್ದಾಣಕ್ಕೆ ಸರಿಯಾದ ಜಾಗ ಗುರುತಿಸುವಂತೆ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತನಗೆ ಸೂಚನೆ ನೀಡಿದ್ದಾರೆ. ಎಲ್ಲಿ ಸೂಕ್ತ ಜಾಗ ಇದೆ ಎಂಬುದನ್ನು ಪರಿಶೀಲಿಸಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪಂಪ್ವೆಲ್ನಲ್ಲಿ ಬಸ್ ನಿಲ್ದಾಣ ರಚನೆಗೆ ಈ ವಾರವೇ ಟೆಂಡರ್ ಕರೆಯಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿ ತಿಳಿಸಿದರು. ಪಂಪ್ವೆಲ್ನಲ್ಲಿ ಕಾದಿರಿಸಿದ ಜಾಗದಲ್ಲೇ ಹೊಸ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದರು. ಕೊಟ್ಟಾರ ಅಥವಾ ಅಳಪೆಯಲ್ಲಿ ಜಿಲ್ಲಾಧಿಕಾರಿ ಸಂಕೀರ್ಣ ನಿರ್ಮಿಸಲು ಸರ್ವೇ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

