ಸುಳ್ಯದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ
ಸುಳ್ಯ: ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಂಡು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಎಬಿವಿಪಿ ಆಗ್ರಹಿಸಿದೆ.
ಎಬಿವಿಪಿ ವತಿಯಿಂದ ಬುಧವಾರ ಸುಳ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮಿತಿ ಮುಖಂಡರು ಅತ್ಯಾಚಾರ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿದರು. ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ನಿದ್ದೆಗೆ ಶರಣಾಗಿದ್ದಾರೆ ಎಂದು ವಿದ್ಯಾರ್ಥಿನಿ ಜ್ಯೋತಿ ದೂರಿದರು. ಪಲ್ಲವಿ ಮಾತನಾಡಿ, ಸರ್ಕಾರ ನ್ಯಾಯದ ಪರವಾಗಿಲ್ಲ, ಹಣದ ಕೈಗೊಂಬೆಯಾಗಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳಾದ ಅಕ್ಷಿತ್ ದೊಡ್ಡಮನೆ, ಕಿರಣ್, ಎಬಿವಿಪಿ ಮುಖಂಡರಾದ ಬಿ.ವಿ. ಹರಿಪ್ರಸಾದ್, ಕಿಶನ್ ಜಬಳೆ, ವಿನಯಕುಮಾರ್ ಕಂದಡ್ಕ ಮಾತನಾಡಿದರು. ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

