ಬೆಳ್ತಂಗಡಿ: ಉಜಿರೆಯಲ್ಲಿ ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿದ ಪ್ರಕರಣದ ವಿರುದ್ಧ ನೈಜ ಆರೋಪಿಗಳ ಪತ್ತೆ ಆಗ್ರಹಿಸಿ, ರಾಜ್ಯಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಶುಕ್ರವಾರ ಸಂಜೆ 4ಕ್ಕೆ ಉಜಿರೆ ಬಸ್ ನಿಲ್ದಾಣ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಂಘಟನೆ ಅಧ್ಯಕ್ಷ ಅತಾವುಲ್ಲ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.