ಸರಕು ವಾಹನದಲ್ಲಿ ನಿಯಮ ಮೀರಿ ಕಾರ್ಮಿಕರ ಸಾಗಾಟ
ಪುತ್ತೂರು: ಸರಕು ವಾಹನದಲ್ಲಿ ಕೂಲಿಯಾಳುಗಳನ್ನು ನಿಯಮ ಮೀರಿ ಸಾಗಾಟ ಮಾಡಲಾಗುತ್ತಿದೆ. ಹೆಚ್ಚಾಗಿ ದಲಿತರೇ ಕೂಲಿಗಳಾಗಿ ದುಡಿಯುತ್ತಿದ್ದಾರೆ. ಈ ರೀತಿಯ ಸಾಗಾಟದಿಂದ ಹಲವಾರು ಅವಘಡ ಸಂಭವಿಸಿ ಪ್ರಾಣ ಹಾನಿ ಇನ್ನಿತರ ಘಟನೆಗಳು ನಡೆದಲ್ಲಿ ಅವರ ಬದುಕಿಗೆ ಯಾವುದೇ ಭದ್ರತೆಯಿಲ್ಲ. ಇಂಥ ಪ್ರಕರಣದ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿ ಮಾನವ ಹಕ್ಕುಗಳನ್ನು ಕಾಪಾಡುವ ಕೆಲಸವಾಗಬೇಕು ಎಂಬ ಆಗ್ರಹ ಪುತ್ತೂರು ತಾಲೂಕಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದು ಕೊರತೆ ಸಭೆಯಲ್ಲಿ ವ್ಯಕ್ತವಾಯಿತು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದು ಕೊರತೆ ಸಭೆ ಇತ್ತೀಚೆಗೆ ಠಾಣೆಯ ಉಪನಿರೀಕ್ಷಕ ಜಗದೀಶ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ದಲಿತ ಮುಖಂಡ ಲೋಹಿತ್ ಅಮ್ಚಿನಡ್ಕ, ಕಾರ್ಮಿಕರನ್ನು ಈ ರೀತಿಯಾಗಿ ಸಾಗಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಜಗದೀಶ್ ರೆಡ್ಡಿ, ಇಂಥ ಪ್ರಕರಣ ಕಂಡು ಬಂದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಹೆಚ್ಚಾಗಿ ಬಡವರು ಮತ್ತು ದಲಿತರು ಮಾತ್ರ ಚಿಕಿತ್ಸೆಗೆ ಆಗಮಿಸುತ್ತಿದ್ದು ಇಲ್ಲಿ ತುರ್ತು ಅವಶ್ಯಕತೆ ಸಂದರ್ಭದಲ್ಲಿ ವೈದ್ಯರು ತಪಾಸಣೆಗೆ ಲಭ್ಯವಾಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರ ಮತ್ತು ಸೂಕ್ತ ರೀತಿಯಲ್ಲಿ ಚಿಕಿತ್ಸೆ ಲಭ್ಯವಾಗುವಂತಾಗಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಉಪನೀರಿಕ್ಷಕರು ದೂರಿನ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಹಾಗೂ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಗುವುದು ಎಂದು ಭವರಸೆ ನೀಡಿದರು.
ಧನಂಜಯ, ಸೀತಾರಾಮ, ಸೌಮ್ಯ ಅಮ್ಚಿನಡ್ಕ, ಮಾಧವ, ಪ್ರವೀಣ್ ಕೌಡಿಚ್ಚಾರು, ಹೇಮಾವತಿ, ಕೇಶವ, ಸುರೇಶ ಆಲಂಕಾರು ಸೇರಿದಂತೆ ಹಲವು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿ ಸಂತೋಷ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

