ದಕ್ಷಿಣ ಕನ್ನಡ

ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ

Published On :

ಸುಳ್ಯ: ರಾಷ್ಟ್ರೀಯ ವಾಹಿನಿಯಲ್ಲಿ ಕನ್ನಡ ಪತ್ರಿಕೆಗಳ ಪ್ರಭಾವ ಅಷ್ಟಾಗಿ ಇಲ್ಲ. ಇತರ ಭಾಷೆಗಳಿಗೆ ಸರಿ ಸಾಟಿಯಾಗಿ ನಿಲ್ಲುವ ಸಾಮರ್ಥ್ಯವನ್ನು ಕನ್ನಡ ಪತ್ರಿಕೆಗಳು ಬೆಳೆಸಿಕೊಳ್ಳಬೇಕಾಗಿದೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಜಿ.ಪಿ.ಶಿವರಾಂ ಹೇಳಿದ್ದಾರೆ. ಸುಳ್ಯ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಲಯನ್ಸ್ಸೇವಾ ಸದನದಲ್ಲಿ ಇತ್ತೀಚೆಗೆ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನ ಸ್ವೀಕಾರ ಮಾಡುತ್ತಾರೆ ಅಂತ ಮಾಧ್ಯಮಗಳು ಮಸಾಲೆ ಸೇರಿಸಿ ನೀಡುತ್ತಿವೆ. ಅತ್ಯಾಚಾರ ಪ್ರಕರಣಗಳ ವೈಭವೀಕರಣ ನಿಲ್ಲಬೇಕು. ಇದಕ್ಕೆ ತಾರ್ಕಿಕ ಅಂತ್ಯ ಹಾಡಬೇಕು. ಜಾಗೃತಿ ಮೂಡಬೇಕು ಎಂದು ಪತ್ರಕರ್ತ ಮಹೋಹರ ಪ್ರಸಾದ್ ಹೇಳಿದರು.  ಪತ್ರಕರ್ತೆ ಅ.ನಾ. ಪೂರ್ಣಿಮಾ ಅವರನ್ನು ಸನ್ಮಾನಿಸಲಾಯಿತು.  ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಕ್ಕೇಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ. ಹರಿಪ್ರಸಾದ್ ರೈ, ಗ್ರಾಮಾಂತರ ಕಾರ್ಯದಶರ್ ಹರೀಶ್ ಬಂಟ್ವಾಳ್ ಅತಿಥಿಯಾಗಿದ್ದರು. ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಗಿರೀಶ್ ಪೆರುಮುಂಡ, ಕಾರ್ಯದರ್ಶಿ ಲೋಕೇಶ್ ಪೆರ್ಲಂಪಾಡಿ, ಖಜಾಂಜಿ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿದ್ದರು. ಚೇತನರಾಂ ಇರಂತಕಜೆ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಶಿವಪ್ರಸಾದ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.