ಸಮಾಧಿ ಸ್ಥಳಾಂತರಕ್ಕೆ ವಿರೋಧ
ಮಂಗಳೂರು: ಕೊಲ್ಲೂರು ನಿತ್ಯಾನಂದ ಆಶ್ರಮದಲ್ಲಿ ವಿಮಲಾನಂದ ಸ್ವಾಮಿ ಸಮಾಧಿ ಸ್ಥಳಾಂತರಕ್ಕೆ ಜಿಲ್ಲಾಡಳಿತ ಒಪ್ಪಿಗೆ ನೀಡಬಾರದು ಎಂದು ನಿತ್ಯಾನಂದ ಸ್ವಾಮಿ ಭಕ್ತರು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಒಂದು ವೇಳೆ ಸಮಾಧಿ ಸ್ಥಳಾಂತರಿಸಿದರೆ ನಿತ್ಯಾನಂದ ಸ್ವಾಮಿ ಭಕ್ತರು ರಾಜ್ಯಾದ್ಯಂತ ಹೋರಾಟ ಪ್ರತಿಭಟಿಸಲಿದ್ದಾರೆ. ನಿತ್ಯಾನಂದ ಆಶ್ರಮದೊಳಗೆ ಸಮಾಧಿ ನಿರ್ಮಿಸಲಾಗಿದೆ. ಜಾತಿ ಕಾರಣಕ್ಕೆ ಸಮಾಧಿ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಕೊಲ್ಲೂರು ಆಡಳಿತ ಮಂಡಳಿಯ ಕೃಷ್ಣ ಪ್ರಸಾದ್ ಅಡ್ಯಂತಾಯ ಅವರು ನಿತ್ಯಾನಂದ ಪರಂಪರೆ ಕುರಿತು ಕೇವಲವಾಗಿ ಮಾತನಾಡಿದ್ದಾರೆ. ಜಿಲ್ಲಾಧಿಕಾರಿಗಳು ಪಟ್ಟ ಭದ್ರ ಹಿತಾಸಕ್ತಿಗೆ ಮಣಿಯಬಾರದು, ಸಮಾಧಿ ಸ್ಥಳಾಂತರಕ್ಕೆ ಒಪ್ಪಿಗೆ ನೀಡಬಾರದು ಎಂದು ದ.ಕ. ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. ವಿಜಯಕುಮಾರ್ ಕೊಡಿಯಾಲಬೈಲ್ ಮತ್ತಿತರರು ನಿಯೋಗದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

